Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಠಾಣೆಯಲ್ಲಿ ಅವಧಿ ಮೀರಿ ಪೊಲೀಸರಿಂದ ಗರ್ಭಿಣಿ ವಿಚಾರಣೆ: ತನಿಖೆಗೆ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
pregnent

ಬೆಂಗಳೂರು: ವಿಚಾರಣೆಗಾಗಿ ಕರೆತಂದ ಗರ್ಭಿಣಿಯನ್ನು ಅವಧಿ ಮೀರಿ ಶೇಷಾದ್ರಿಪುರಂ ಠಾಣೆಯಲ್ಲಿ‌ ಇರಿಸಿಕೊಂಡ ಆರೋಪ ಕುರಿತು ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.

ಶೇಷಾದ್ರಿಪುರಂ ಠಾಣೆ ಪೊಲೀಸರ ವಿರುದ್ಧ ಕೇಳಿಬಂದಿರುವ ಆರೋಪದ‌ ಕುರಿತು ಕೇಂದ್ರ ವಿಭಾಗದ ಡಿಸಿಪಿ ಹಾಗೂ ಶೇಷಾದ್ರಿಪುರಂ ಉಪವಿಭಾಗದ ಎಸಿಪಿಯವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಕೆ.ಸಿ.ಜನರಲ್ ಆಸ್ಪತ್ರೆಗೆ ಇಂಜೆಕ್ಷನ್ ಪಡೆದುಕೊಳ್ಳಲು ಪತಿಯೊಂದಿಗೆ ಮಹಿಳೆಯೊಬ್ಬರು ಬಂದಿದ್ದರು. ಆಧಾರ್ ಕಾರ್ಡ್ ಪರಿಶೀಲನೆ ವೇಳೆ ಆಕೆಗೆ ಪ್ರಸ್ತುತ 18 ವರ್ಷ 1 ತಿಂಗಳು ಮತ್ತು 20 ದಿನ ಎಂಬುದು ವೈದ್ಯಕೀಯ ಸಿಬ್ಬಂದಿಯ ಗಮನಕ್ಕೆ ಬಂದಿತ್ತು. ಆದರೆ ಈಗಾಗಲೇ ಆಕೆ 4 ತಿಂಗಳ ಗರ್ಭಿಣಿಯಾಗಿರುವುದರ ಕುರಿತು ಆಸ್ಪತ್ರೆ ಸಿಬ್ಬಂದಿ ಕೂಡಲೇ ಶೇಷಾದ್ರಿಪುರಂ ಠಾಣೆಗೆ ಮಾಹಿತಿ ನೀಡಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಹಿಳೆ ಮತ್ತು ಆಕೆಯ ಪತಿಯನ್ನು ಠಾಣೆಗೆ ಕರೆತಂದ ಪೊಲೀಸರು, ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಇರಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್, ”18 ವರ್ಷ ತುಂಬುವ ಮುನ್ನವೇ ಗರ್ಭಿಣಿಯಾಗಿರುವುದರ ಕುರಿತು ಕೆ.ಸಿ.ಜನರಲ್ ಆಸ್ಪತ್ರೆಯಿಂದ ಎಂಎಲ್‌ಸಿ ರಿಪೋರ್ಟ್ ಬಂದಿತ್ತು. ಈ ಕುರಿತು ವಿಚಾರಣೆಗಾಗಿ ಠಾಣೆಗೆ ಕರೆಯಲಾಗಿತ್ತು. ಇಬ್ಬರೂ ಸಹ ಮದುವೆಯಾಗಿ ಒಟ್ಟಿಗೆ ವಾಸವಿದ್ದಾರೆ. ಈ ಕುರಿತು ಯಾರೂ ಸಹ ದೂರು ನೀಡಿಲ್ಲ ಎಂದರು.

ಶೇಷಾದ್ರಿಪುರಂ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಗರ್ಭಿಣಿಯನ್ನ ಅವಧಿ ಮೀರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡ ಬಗ್ಗೆ ಆಂತರಿಕ ತನಿಖೆ ಕೈಗೊಂಡು, ವರದಿ ನೀಡುವಂತೆ ಡಿಸಿಪಿ ಹಾಗೂ ಎಸಿಪಿಯವರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment