Wednesday, December 24, 2025
Google search engine
Homeಅಪರಾಧಜಮೀನು ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳ ಕೊಂದು ಕತೆ ಕಟ್ಟಿದ ಪಾಪಿ ಅಪ್ಪ!

ಜಮೀನು ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳ ಕೊಂದು ಕತೆ ಕಟ್ಟಿದ ಪಾಪಿ ಅಪ್ಪ!

ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳನ್ನೇ ಕೊಂದ ಪಾಪಿ ತಂದೆ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುಗರಿ ಜಿಲ್ಲೆಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಹಂಗರಗಾ ಗ್ರಾಮದ ನಿವಾಸಿ ಗುಂಡೇರಾವ 17 ವರ್ಷದ ಪುತ್ರಿ ಮಂಜುಳಾ ಕೊಲೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಕಲಬುರಗಿ ನಗರ ಪೊಲೀಸ್​ ಆಯುಕ್ತರಾದ ಡಾ.ಶರಣಪ್ಪ ಶನಿವಾರ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 17 ವರ್ಷದ ಬಾಲಕಿ ನೇಣು ಬಿಗಿದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಸಂಶಯಾಸ್ಪದ ರೀತಿಯಲ್ಲಿ ಸಾವು ಕಂಡುಬಂದಿತ್ತು. ಡೆತ್​​ ನೋಟ್ ಕೂಡ​ ದೊರೆತಿದೆ ಎಂದರು.

ಮೃತಳು ಪಾರ್ಶ್ವವಾಯು ಬಾಧಿತಳು ಹಾಗೂ ವಿಕಲಚೇತನೆಯಾಗಿದ್ದಾಳೆ. ಹಾಗಾಗಿ, ನಾವು ಅಲ್ಲಿನ ಸ್ಥಳೀಯ ಮಾಹಿತಿಯನ್ನು ಕಲೆ ಹಾಕಿದೆವು. ಅಲ್ಲದೆ, ಬೆರಳಚ್ಚು ತಜ್ಞರ ತಂಡ ಹಾಗೂ ಫೋರೆನ್ಸಿಕ್ ತಂಡದಿಂದ ಪರಿಶೀಲನೆ ನಡೆಯಿತು ಎಂದು​ ಅವರು ತಿಳಿಸಿದರು.

ಘಟನೆ ಬಗ್ಗೆ ಮೃತರ ತಾಯಿ ದೂರು ನೀಡಿದ್ದರು. ತಮ್ಮ ಕುಟುಂಬಕ್ಕೆ ಪಕ್ಕದ ಜಮೀನಿನವರ ಜೊತೆ ಸುಮಾರು ವರ್ಷಗಳಿಂದ ವಾಗ್ವಾದವಿದೆ. ಅವರು ಹೊಲಕ್ಕೆ ಹೋಗಲು ದಾರಿ ಬಿಡುತ್ತಿಲ್ಲ. ಹಾಗಾಗಿ, ಅವರೇ ಏನಾದರೂ ಮಾಡಿರಬಹುದು ಎಂದು ಕೊಲೆ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಆರಂಭಿಸಿದ ಸ್ಥಳೀಯ ಎಸಿಪಿ, ಇನ್ಸ್​ಪೆಕ್ಟರ್​​ ಹಾಗೂ ಅವರ ತಂಡ ಅನುಮಾನ ವ್ಯಕ್ತಪಡಿಸಿದ ವ್ಯಕ್ತಿಗಳ ತನಿಖೆ ಸೇರಿದಂತೆ, ಎಲ್ಲಾ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿದರು. ಬಳಿಕ ತನಿಖೆಯಲ್ಲಿ, ಮೃತಳ ತಂದೆಯೇ ಮಗಳನ್ನು ಕೊಲೆಯನ್ನು ಮಾಡಿರುವುದು ಬಯಲಾಗಿದೆ ಎಂದು ಡಾ.ಶರಣಪ್ಪ ವಿವರಿಸಿದರು.

ಮೃತಳ ತಂದೆ ಗುಂಡೇರಾವ ಕೃಷಿಕನಾಗಿದ್ದು, ವಿಚಾರಣೆ ನಡೆಸಿದಾಗ, ಜಮೀನು ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಲೆಂದು ವಿಕಲಚೇತನ ಮಗಳನ್ನು ಬಳಸಿಕೊಂಡಿರುವುದು ಬಾಯಿಬಿಟ್ಟಿದ್ದಾನೆ.

ಡೆತ್​ನೋಟ್​ ಕೂಡ​ ಆತನೇ ಬರೆದಿದ್ದು, ಅದರಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಪಕ್ಕದ ಜಮೀನವರು ಎಂದು ಉಲ್ಲೇಖಿಸಲಾಗಿದೆ. ಮಗಳನ್ನು ಆತ್ಮಹತ್ಯೆಗೆ ತಂದೆಯೇ ಮನವೊಲಿಸಿದ್ದ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಸದ್ಯ ಆರೋಪಿ ಗುಂಡೇರಾವ​ನನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಆಯುಕ್ತ ಡಾ.ಶರಣಪ್ಪ ಅವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments