Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಸುಳ್ಳು ದೂರು ನೀಡಿದರೆ ಕಠಿಣ ಕ್ರಮ: ಬೆಂಗಳೂರು ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
police commissioner dayanand
police commissioner dayanand

ಬೆಂಗಳೂರು: ಪೊಲೀಸ್ ಠಾಣೆಗಳಿಗೆ ಸುಳ್ಳು ದೂರು ನೀಡಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಳ್ಳು ದೂರು ದಾಖಲಿಸಲಾಗಿದ್ದ 6 ಪ್ರಕರಣಗಳಲ್ಲಿ ಸುಳ್ಳು ದೂರು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

ನಾಲ್ಕು ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಎರಡು ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ಶಿಕ್ಷೆ ಘೋಷಿಸಲಾಗಿದೆ, ಉಳಿದ ಎರಡು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ದ ಕ್ರಮಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಲ್ಲೆ ಪ್ರಕರಣದಲ್ಲಿ ತನಿಖಾ ಸಮಯದಲ್ಲಿ ದೂರುದಾರರು ಸುಳ್ಳು ದೂರು ನೀಡಿದ್ದು ಅದು ಸಾಬೀತಾದ ಕಾರಣ, ಅವರ ವಿರುದ್ಧ ಆದೇ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ತಪ್ರೊಪ್ಪಿಕೊಂಡ ಕಾರಣ 500 ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ತಪ್ಪಿದಲ್ಲಿ ಐದು ದಿನ ಸಾದಾ ಶಿಕ್ಷೆ ಘೋಷಿಸಲಾಗಿದೆ ಎಂದು ಅವರು ಹೇಳಿದರು.

ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಾಹನ ಕಳವು ಪ್ರಕರಣದ ತನಿಖೆ ವೇಳೆ ದೂರುದಾರರು ಸುಳ್ಳು ದೂರು ನೀಡಿರುವುದು ಸಾಬೀತಾದ ಕಾರಣ, ಅವರ ವಿರುದ್ದ ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ತಪ್ಪೋಪ್ಪಿಕೊಂಡ ಕಾರಣ, ನ್ಯಾಯಾಲಯವು ಆರೋಪಿಗೆ 100 ರೂ.ದಂಡ ವಿಧಿಸಿದ್ದು, ದಂಡ ಕಟ್ಟಲು ತಪ್ಪಿದಲ್ಲಿ ಐದು ದಿನ ಸಾದಾ ಶಿಕ್ಷೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment