Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಮದುವೆ ಆಗಬೇಕಿದ್ದ ಯುವತಿಯನ್ನೇ ಕತ್ತು ಸೀಳಿ ಕೊಂದ ಭಾವಿ ಪತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
crime
crime

ಬೆಂಗಳೂರು: ಹಸೆಮಣೆ ಏರಿ ಹೊಸ ಜೀವನ ಆರಂಭಿಸಬೇಕಿದ್ದ ಯುವತಿಯೊಬ್ಬಳು ತನ್ನ ಭಾವಿ ಪತಿಯ ಕೈಯಲ್ಲೇ ಕ್ರೂರವಾಗಿ ಕೊಲೆಯಾಗಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೋಯಾ (19) ಎಂಬಾಕೆಯನ್ನು ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿ ಮದುವೆ ಆಗಬೇಕಿದ್ದ ಶಬೀಲ್ (20) ಎಂಬ ಯುವಕನೇ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಇಬ್ಬರೂ ಶೀಘ್ರ ಮದುವೆಯಾಗಬೇಕಿತ್ತು. ಆದರೆ, ವಿಧಿಯಾಟವೇ ಬೇರೆಯಾಗಿತ್ತು. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಶಬೀಲ್, ಜೋಯಾಳನ್ನು ಡಿಜೆ ಹಳ್ಳಿಯ ಸಕ್ಕರೆ ಮಂಡಿ ಏರಿಯಾದಲ್ಲಿರುವ ತನ್ನ ಕುಟುಂಬಕ್ಕೆ ಸೇರಿದ ಪಾಳು ಬಿದ್ದ ಮನೆಗೆ ಕರೆತಂದಿದ್ದಾನೆ. ಅಲ್ಲಿ ಇಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಶಬೀಲ್, ತನ್ನ ಬಳಿಯಿದ್ದ ಆಯುಧದಿಂದ ಜೋಯಾಳ ಕತ್ತನ್ನು ಸೀಳಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಬೆಳಿಗ್ಗೆ 6:30ರ ಸುಮಾರಿಗೆ ಆರೋಪಿ ಶಬೀಲ್ ಕುಟುಂಬಸ್ಥರು ಆ ಪಾಳು ಬಿದ್ದ ಮನೆಗೆ ಬಂದಾಗ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಡಿಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯನ್ವಯ, ಹತ್ಯೆಯಾಗಿರುವ ಅಪ್ರಾಪ್ತೆ ಹಾಗೂ ಶಂಕಿತ ಆರೋಪಿಗೆ ಮದುವೆ ನಿಶ್ಚಿತಾರ್ಥವಾಗಿತ್ತು. ಬಕ್ರೀದ್ ಹಬ್ಬದ ನಂತರ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಇಬ್ಬರೂ ಸಹ ಸಕ್ಕರೆ ಮಂಡಿಯಲ್ಲಿರುವ ಶಬೀಲ್‌ನ ಸಂಬಂಧಿಕರ ಒಡೆತನದ ಪಾಳು ಬಿದ್ದ ಕಟ್ಟಡದ ಬಳಿ ಭೇಟಿಯಾಗುತ್ತಿದ್ದರು ಎಂದು ​ ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಆಯುಧ, ನಿಖರ ಕಾರಣಗಳ ಕುರಿತು ಆರೋಪಿಯ ಬಂಧನದ ಬಳಿಕ ತಿಳಿಯಬೇಕಿದ್ದು ಆತನ ಬಂಧನಕ್ಕಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment