Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೆಂಗಳೂರಿನಲ್ಲಿ ಪೈಶಾಚಿಕ ಘಟನೆ: ಪ್ರೀತಿ ನಾಟಕವಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಮೂವರು ಸ್ನೇಹಿತರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
ramanagar rape case

ಪ್ರೀತಿಯ ನಾಟಕವಾಡಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ಎಸಗಿದ ಮೂವರನ್ನು ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ರಾಮನಗರ ಸಮೀಪದ ಮಾಗಡಿಯಲ್ಲಿ ನಡೆದಿದೆ.

ಮಾಗಡಿಯಲ್ಲಿ ಅಕ್ಟೋಬರ್‌ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬೆಂಗಳೂರಿನಲ್ಲಿ 19 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿದ ಸ್ಥಳೀಯ ನಿವಾಸಿಗಳಾದ ವಿಕಾಸ್, ಪ್ರಶಾಂತ್ ಮತ್ತು ಚೇತನ್ ಅವರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಇಬ್ಬರು ಕಾಲೇಜು ವಿದ್ಯಾರ್ಥಿಗಳಾಗಿದ್ದರೆ, ಒಬ್ಬ ಎಲೆಕ್ಟ್ರಿಷಿಯನ್‌ ಆಗಿದ್ದಾನೆ.

ಆರು ತಿಂಗಳ ಹಿಂದೆ ಪ್ರಮುಖ ಆರೋಪಿ ವಿಕಾಸ್, ಕಾಲೇಜು ವಿದ್ಯಾರ್ಥಿನಿಯ ಸಂಪರ್ಕಕ್ಕೆ ಬಂದಿದ್ದ. ನಂತರ ಇಬ್ಬರ ನಡುವಿನ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿತ್ತು. ಮದುವೆಯಾಗುವ ಭರವಸೆ ನೀಡಿದ್ದ ಆರೋಪಿ, ಯುವತಿ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಇದರ ಜೊತೆಗೆ ಕೃತ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ಈ ವಿಡಿಯೋವನ್ನು ಸಹ ಆರೋಪಿಗಳಾಗಿರುವ ತನ್ನ ಸ್ನೇಹಿತರಿಗೂ ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ ತಿಂಗಳಿನಲ್ಲಿ ಸತತವಾಗಿ ಓರ್ವ ಆರೋಪಿ ಸಂತ್ರಸ್ತ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಆಕೆಯೊಂದಿಗಿನ ಫೋಟೋಗಳನ್ನು ತೆಗೆದುಕೊಂಡು ಬೆದರಿಕೆ ಹಾಕಿದ್ದಾನೆ. ನಂತರ ಅದನ್ನೇ ಬಂಡವಾಳ ಮಾಡಿಕೊಂಡು ಮತ್ತೆ ಯುವತಿಯನ್ನು ಬೆದರಿಸಿದ ಆತ, ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

ಆ ಬಗ್ಗೆ ಯುವತಿ ದೂರು ನೀಡಿರುವುದರಿಂದ ಆರೋಪಿಗಳನ್ನು ಬಂಧಿಸಿದ್ದೇವೆ. ಸಂತ್ರಸ್ತೆ ಹಾಗೂ ಆರೋಪಿಗಳೆಲ್ಲರೂ ಒಂದೇ ಕಾಲೊನಿಯ ನಿವಾಸಿಗಳು. ಆರೋಪಿಗಳಲ್ಲಿ ಓರ್ವ ಕೆಲಸ ಮಾಡುತ್ತಿದ್ದು, ಉಳಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು. ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್​ಗೆ ಏರ್ಪಾಡು ಮಾಡಿದ್ದೇವೆ” ಎಂದು ಎಸ್ಪಿ ಶ್ರೀನಿವಾಸ್​ ಗೌಡ ಮಾಹಿತಿ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment