Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
fake high court documents
fake high court documents

ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ ಆದೇಶ ಪ್ರತಿ ತಯಾರಿಸುತ್ತಿದ್ದರು. ಅದನ್ನು ಬಳಸಿಕೊಂಡು ಅನೇಕರನ್ನು ವಂಚಿಸಿದ್ದರು. ಒಬ್ಬ ಆರೋಪಿಯಂತೂ, ತನ್ನ ಪ್ರೇಯಸಿಯ ಸ್ನೇಹಿತನನ್ನೇ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಆರೋಪಿ ವಿಜೇತ್, ಜಾರಿ ನಿರ್ದೇಶನಾಲಯ (ಇಡಿ) ಹಣ ಮುಟ್ಟುಗೋಲು ಹಾಕಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದ್ದು ಎಂಬ ನಂಬಿಕೆ ಬರುವ ರೀತಿಯಲ್ಲಿ ಹೈಕೋರ್ಟ್ ಆದೇಶವನ್ನೇ ಹೋಲುವಂತೆ ನಕಲಿ ಆದೇಶ ಪ್ರತಿ ತಯಾರಿಸಿದ್ದನು.
ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಒಂದು ಕೋಟಿ ರೂಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ಹೈಕೋರ್ಟ್​ ಈ ತಮ್ಮ ಪರ ತೀರ್ಪು ನೀಡಿದ್ದು, ಸೀಜ್ ಮಾಡಿದ ಹಣವನ್ನು ಜಾರಿ ನಿರ್ದೇಶನಾಲಯ ನಮಗೆ ನೀಡಬೇಕಿದೆ. ಆ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ಹಣ ಬೇಕಾಗಿದೆ.
ಮೊತ್ತ ಕೈಸೇರಿದ ಕೂಡಲೇ ಹಿಂದಿರುಗಿಸುವುದಾಗಿ ಆರೋಪಿಗಳು ಜನರನ್ನು ವಂಚಿಸುತ್ತಿದ್ದರು. ಹೈಕೋರ್ಟ್ ಆದೇಶವನ್ನೇ ಹೋಲುವ ನಕಲಿ ಪ್ರತಿ ತಯಾರಿಸಿ ಜನರಲ್ಲಿ ನಂಬಿಕೆ ಬರುವಂತೆ ಮಾಡಿ ಹಣ ಪೀಕುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.
ಆರೋಪಿಗಳು ನಮಗೆ ಇಡಿ ಅಧಿಕಾರಿಗಳಿಂದ ಕೋಟ್ಯಂತರ ರೂ ಬಿಡುಗಡೆ ಆಗಬೇಕಿದೆ. ಅದಕ್ಕೆ ಹೈಕೋರ್ಟ್ ಆದೇಶ ಕೂಡ ಮಾಡಿದೆ. ಆದರೆ, ಈಗ ನನಗೆ ಇದನ್ನು ಬಿಡಿಸಿಕೊಳ್ಳಲು ಹಣ ಕಟ್ಟಬೇಕಿದೆ. ಇಡಿ ಕೊಟ್ಟ ಬಳಿಕ ಹಣ ವಾಪಸ್​ ಕೊಡುವುದಾಗಿ ಆರೋಪಿಗಳು ಹೇಳಿದ್ದರು. ಇದನ್ನು ನಂಬಿ ಹಣ ಕೊಟ್ಟ ಮೂವರಿಗೆ ವಂಚನೆ ಎಸಗಿದ್ದರು. ಸುಮಾರು 70 ಲಕ್ಷ ರೂಗೂ ಹೆಚ್ಚಿನ ಹಣ ಪಡೆದು ವಂಚಿಸಿದ್ದರು. ವಿಧಾನಸೌಧ ಪೊಲೀಸರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment