Thursday, December 25, 2025
Google search engine
Homeಅಪರಾಧರಾಜ್ಯದಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ: ಪಿಸ್ತೂಲು ತೋರಿಸಿ 8 ಕೋಟಿ ರೂ ನಗದು, 50 ಕೆಜಿ...

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ: ಪಿಸ್ತೂಲು ತೋರಿಸಿ 8 ಕೋಟಿ ರೂ ನಗದು, 50 ಕೆಜಿ ಚಿನ್ನಾಭರಣ ದರೋಡೆ!

ಪಿಸ್ತೂಲು ಹಾಗೂ ಮಾರಾಕಸ್ತ್ತಗಳನ್ನು ತೋರಿಸಿ ಬೆದರಿಸಿದ ಮುಸುಕುಧಾರಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ ನಿಂದ 8 ಕೋಟಿ ರೂ ನಗದು, 50 ಕೆಜಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಮಂಗಳವಾರ ಸಂಜೆ 7 ಗಂಟೆಗೆ ಬ್ಯಾಂಕ್‌ ಮುಚ್ಚುವ ಸಮಯದಲ್ಲಿ ನುಗ್ಗಿದ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಂದಾಜು 8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳು ಅಣಿಯಾಗುತ್ತಿದ್ದ ವೇಳೆ ಮಿಲಿಟರಿ ಬಣ್ಣದ ಬಟ್ಟೆ ಧರಿಸಿದ್ದ ದರೋಡೆಕೋರರು ಬ್ಯಾಂಕಿನ ಮುಖ್ಯ ದ್ವಾರದ ಮೂಲಕ ಪ್ರವೇಶಿಸಿದ್ದಾರೆ.

ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ, ದರೋಡೆ ಮಾಡಿದ್ದಾರೆ. ದರೋಡೆಕೋರರು ಘಟನೆ ಬಳಿಕ ಕದ್ದ ಚಿನ್ನಾಭರಣವನ್ನು ವಾಹನಗಳಲ್ಲಿ ಹೇರಿಕೊಂಡು ಮಹಾರಾಷ್ಟ್ರದತ್ತ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದು, ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್‌ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ದರೋಡೆ ವಿಷಯ ತಿಳಿಯುತ್ತಿದ್ದಂತೆ ಸಾವಿರಾರು ಜನ ಬ್ಯಾಂಕ್‌ ಎದುರು ಜಮಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments