Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

2 ಕೋಟಿ ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ಗಂಡನ ಕೊಲ್ಲಿಸಿದ ಹೆಂಡತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 37 ವೀಕ್ಷಣೆಗಳು
wife kills husband

2 ಕೋಟಿ ರೂ. ವಿಮೆ ಹಣ ಪಡೆದು ಪ್ರಿಯಕರನ ಜೊತೆ ಸುಖ ಜೀವನ ನಡೆಸಲು ಪತ್ನಿ ಗಂಡನನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮೇ 22ರಂದು ಹಾಜಿಪುರ ಮಂಡಲದ ಗುಡಿಪೇಟೆಯ ಸೈನಿ ಕುಮಾರ್ (45) ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕರೀಂನಗರ ಆಸ್ಪತ್ರೆಗೆ ಅಂಬುಲೆನ್ಸ್​ನಲ್ಲಿ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು. ವಿಚಾರಣೆ ವೇಳೆ ಪತ್ನಿಯೇ ಸುಮಾರು 1 ವರ್ಷ  ಕಾಲ ಸಂಚು ರೂಪಿಸಿ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ.

ಸೈನಿ ಕುಮಾರ್ ಅವರ ಪತ್ನಿ ಭಾರತಿ ಗುಡಿಪೇಟೆಯ ಲಗಿಸೆಟ್ಟಿ ಸುರೇಂದರ್ ಎಂಬವನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದು, ಇದಕ್ಕೆ ಅಡ್ಡಿಯಾಗಿದ್ದ ಪತಿ ಕುಮಾರ್​ನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಳು. ಪತಿ ಎಲ್​ಐಸಿ ಸೇರಿದಂತೆ ಹಲವು ವಿಮಾ ಕಂಪನಿಗಳಲ್ಲಿ ಪ್ರೀಮಿಯಂ ಪಾವತಿಸುತ್ತಿದ್ದರಿಂದ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ ತನಗೆ 2 ಕೋಟಿ ರೂಪಾಯಿ ಸಿಗುತ್ತದೆ ಎಂದು ಯೋಜನೆ ರೂಪಿಸಿದ್ದಳು.

ಕುಮಾರ್​ ಗುಡಿಪೇಟೆಯ ರಾಮ್​ ಮಲ್ಲೇಶ್​ ಅವರಿಂದ 60 ಸಾವಿರ ರೂ ಹಣ ಪಡೆದು ಪಾವತಿಸಿರಲಿಲ್ಲ. ಈ ವ್ಯವಹಾರದಲ್ಲಿ ಮಲ್ಲೇಶ್​ ಕುಮಾರ್​ಗೆ ಭಾರತಿ ಪರಿಚಯವಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಭಾರತಿ, ಮಲ್ಲೇಶ್​ಗೆ ಪತಿಯನ್ನು ಕೊಂದರೆ 10 ಲಕ್ಷ ರೂ ನೀಡುವುದಾಗಿ ತಿಳಿಸಿ, ಮುಂಗಡ 2 ಲಕ್ಷ ರೂಪಾಯಿ ಹಣವನ್ನೂ ಕೊಟ್ಟಿದ್ದಳು. ಮಲ್ಲೇಶ್ ಮಂಚೇರಿಯಲ್‌ನ ಎಲ್‌ಐಸಿ ಕಾಲೊನಿಯ ಶ್ರೀರಾಮ್ ಎಂಬಾತನ ಜೊತೆ ಸೇರಿ ಕೊಲೆಗೆ ಸ್ಕೆಚ್ ಹಾಕಿದ್ದಾರೆ.

ಯೋಜನೆಯಂತೆ ಮಲ್ಲೇಶ್ ಮತ್ತು ಶ್ರೀರಾಮ್ ಮೇ 22ರಂದು ಕುಮಾರ್‌ಗೆ ಮದ್ಯ ಕುಡಿಸಿ ತಲೆಗೆ ಸುತ್ತಿಗೆಯಿಂದ ಹೊಡೆದು, ರಸ್ತೆ ಅಪಘಾತವೆಂದು ಬಿಂಬಿಸಲು ಕುಮಾರ್ ಮತ್ತು ಆತನ ದ್ವಿಚಕ್ರ ವಾಹನವನ್ನು ರಸ್ತೆ ಬದಿಯಲ್ಲೇ ಬಿಟ್ಟು ಪರಾರಿಯಾಗಿದ್ದರು.

ಕುಮಾರ್ ಅವರ ತಾಯಿ ಲಕ್ಷ್ಮಿ ತಮ್ಮ ಮಗನ ಸಾವಿನಲ್ಲಿ ರಾಮ್ ಮಲ್ಲೇಶ್ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪತ್ನಿಯ ನಡವಳಿಕೆಗಳ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ತೀವ್ರ ಪರಿಶೀಲನೆ ನಡೆಸಿದ್ದಾರೆ.

ಎಸಿಪಿ ಪ್ರಕಾಶ್ ಮತ್ತು ಮಂಚೇರಿಯಲ್ ಗ್ರಾಮೀಣ ಸಿಐ ರವೀಂದರ್ ತಂಡದ ತನಿಖೆಯಲ್ಲಿ, ಇದು ರಸ್ತೆ ಅಪಘಾತವಲ್ಲ, ಕೊಲೆ ಎಂಬುದನ್ನು ಕಂಡುಕೊಂಡಿದ್ದಾರೆ. ಆರೋಪಿಗಳಿಂದ ಪ್ರೀಮಿಯಂ ಮತ್ತು 25 ಸಾವಿರ ರೂ. ನಗದು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಭಾರತಿ, ಸುರೇಂದರ್ ಮತ್ತು ಶ್ರೀರಾಮ್ ಎಂಬವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ರಾಮ್ ಮಲ್ಲೇಶ್ ತಲೆಮರೆಸಿಕೊಂಡಿದ್ದು, ಶೋಧ ನಡೆಯುತ್ತಿದೆ ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment