Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ಅಪರಾಧ

ಬೆಂಗಳೂರಿನಲ್ಲಿ ಸಾಕುನಾಯಿಯ ಕತ್ತು ಸೀಳಿ ಕೊಂದ ಮಹಿಳೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
DOG

ಬೆಂಗಳೂರು: ವಾಮಾಚಾರಕ್ಕೆ ಸಾಕು ನಾಯಿಯನ್ನೇ ಮಹಿಳೆ ಕತ್ತು ಸೀಳಿ ಕೊಂದು ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹದೇವಪುರದ  ಚಿನ್ನಪ್ಪ ಲೇಔಟ್ ನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಈ ಕೃತ್ಯ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಾಮಾಚಾರಕ್ಕಾಗಿ ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು ಹತ್ಯೆ ಮಾಡಿ ಬಚ್ಚಿಟ್ಟಿದ್ದಳು ಎನ್ನಲಾಗುತ್ತಿದೆ. ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್‌ಮೆಂಟ್ ವಾಸವಾಗಿದ್ದ ಮಹಿಳೆ, ನಾಯಿಯ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಹತ್ಯೆ ನಂತರ ನಾಯಿಯನ್ನು ಬಟ್ಟೆಯಲ್ಲಿ ಸುತ್ತಿಟ್ಟಿದ್ದು ಪ್ರಕರಣ ಬೆಳಕಿಗೆ ಬಂದಿದೆ.

ಈ ಮಹಿಳೆ 4 ಲ್ಯಾಬೋಡರ್‌ ನಾಯಿಗಳನ್ನ ಸಾಕಿದ್ದು, ಒಂದು ನಾಯಿಯನ್ನು ಕೊಂದಿದ್ದಾರೆ ಎನ್ನಲಾಗುತ್ತಿದೆ. ಮೃತ ನಾಯಿ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಕಳೇಬರ ಸಿಕ್ಕಿದೆ. ಇದನ್ನು ಮರಣೋತ್ತರ ಪರೀಕ್ಷೆಗೆಂದು ಕಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಹತ್ಯೆ ಮಾಡಿದ್ದು, ಬ್ಲ್ಯಾಕ್ ಮ್ಯಾಜಿಕ್‌ಗಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಹದೇವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು  ನಡೆಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment