ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿ ಕೇಂದ್ರಕ್ಕೆ ಬರುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಬಾಲಕಿ ಕುಟುಂಬದವರು ದೂರಿನಲ್ಲಿ ಆರೋಪಿಸಿದ್ದಾರೆ.
ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


