Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಮದುವೆ ಆಗುವುದಾಗಿ ಯುವತಿಗೆ ವಂಚನೆ: ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 530 ವೀಕ್ಷಣೆಗಳು
swamiji arrest

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿ, ಜೀವ ಬೆದರಿಕೆ ಹಾಕಿದ ಮದ್ದಾವಣಪುರ ದೇವವೀರ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸ್ವಾಮೀಜಿಯ ಆಪ್ತ ಜಗದೀಶ್ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತ ಯುವತಿ ತನ್ನ ಹತ್ತು ವರ್ಷದ ವಯಸ್ಸಿನಿಂದಲೇ ಹುಣಸಮಾರನಹಳ್ಳಿ ಮಠದ ಎದುರಿನ ಮನೆಯಲ್ಲಿ ಅತ್ತೆಯೊಂದಿಗೆ ವಾಸವಾಗಿದ್ದು, ಮಠದ ಶಾಲೆ ಮತ್ತು ಕಾಲೇಜಿನಲ್ಲಿಯೇ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಳು. ಈ ಹಿನ್ನೆಲೆಯಲ್ಲಿ ಗುರುನಂಜೇಶ್ವರ ಸ್ವಾಮೀಜಿ ಹಾಗೂ ಅವರ ಕುಟುಂಬದ ಸದಸ್ಯರೊಂದಿಗೆ ಯುವತಿಗೆ ಪರಿಚಯವಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

2023ರಲ್ಲಿ ಸ್ವಾಮೀಜಿ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಸ್ವಾಮೀಜಿ ಯುವತಿಯ ಫೋಟೋಗಳನ್ನು ತೆಗೆದುಕೊಂಡಿದ್ದರು. ಬಳಿಕ ಯುವತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವುದು ಹಾಗೂ ಸಂದೇಶಗಳನ್ನು ಕಳುಹಿಸುವ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಕ್ಯಾಮೆರಾ ಸ್ಥಗಿತಗೊಳಿಸಿ ಸರಸ:

ಯುವತಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಸ್ವಾಮೀಜಿ, ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಮದುವೆಯಾದ ಬಳಿಕ ಚೆನ್ನಾಗಿ ನೋಡಿಕೊಳ್ಳುವುದಾಗಿ ನಂಬಿಸಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

2025ರಿಂದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಮಠದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ, ಕಾರಿನಲ್ಲಿ ಹೊರಗೆ ಕರೆದುಕೊಂಡು ಹೋಗಿಯೂ ಇದೇ ರೀತಿ ವರ್ತಿಸಿದ್ದರು ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

ಜೀವ ಬೆದರಿಕೆ ಆರೋಪ:

ಸ್ವಾಮೀಜಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರಿಂದ ಯುವತಿ ಮದುವೆಯಾಗುವಂತೆ ಒತ್ತಾಯಿಸಿದ್ದಳು. ಆದರೆ, ಬಳಿಕ ಸ್ವಾಮೀಜಿ ಮದುವೆಯಾಗಲು ನಿರಾಕರಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಈ ವಿಚಾರವನ್ನು ಬೇರೆಯವರಿಗೆ ತಿಳಿಸಿದರೆ ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮನೆ ಖಾಲಿಗೆ ಒತ್ತಡ:

2026ರ ಏಪ್ರಿಲ್ 2ರಂದು ಗುರುನಂಜೇಶ್ವರ ಶ್ರೀ ಅಲಿಯಾಸ್ ದಯಾನಂದ ಅವರ ಆಪ್ತ ಜಗದೀಶ್ ಯುವತಿಯನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಸ್ವಾಮೀಜಿ ನಿನ್ನನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ನೀನು ಬೇರೆಯವರನ್ನು ಮದುವೆಯಾಗಿ ಹೋಗಬೇಕು. ಇಲ್ಲವೇ ನಾವು ನೀಡುವ ಹಣವನ್ನು ಪಡೆದುಕೊಂಡು ಮನೆ ಖಾಲಿ ಮಾಡಬೇಕು ಎಂದು ಜಗದೀಶ್ ಎಚ್ಚರಿಕೆ ನೀಡಿದ್ದಾಗಿ ಯುವತಿ ಆರೋಪಿಸಿದ್ದಾಳೆ.

ಮಹಿಳಾ ಠಾಣೆಯಲ್ಲಿ ದೂರು:

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಲಾಗಿದೆ. ತನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಬಂಧಿಸಿದ್ದು, ಅವರ ಆಪ್ತ ಜಗದೀಶ್ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment