ಪಾಟ್ನಾ: ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಗನ್ ಮ್ಯಾನ್ ಹಾಗೂ ಸಿಆರ್ ಪಿಎಫ್ ಯೋಧ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.
ಪಾಟ್ನಾದ ಎಂಎಲ್ ಸಿ ಫ್ಲಾಟ್ ನಲ್ಲಿ ಯೋಧ ಅಶುತೋಷ್ ಕುಮಾರ್ ಮಿಶ್ರಾ (45) ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.
ಅಶುತೋಷ್ ಕುಮಾರ್ ಮಿಶ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆಯೇ ಎಂಬ ಶಂಕೆ ಇದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.



