ದೇಶದ ಅತ್ಯಂತ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಕೇಂದ್ರ ಸಚಿವ ಅಶ್ವಿನಿ ವೈಭವ್ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಚಿತ್ರರಂಗದಲ್ಲಿ ಜೀವಮಾನದ ಸಾಧನೆಗಾಗಿ ಮಿಥುನ್ ಚಕ್ರವರ್ತಿ ಅವರನ್ನು ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
74 ವರ್ಷದ ಮಿಥುನ್ ಚಕ್ರವರ್ತಿ ಅಕ್ಟೋಬರ್ 8ರಂದು ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಅವರು ಹೇಳಿದರು.
ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಮಿಥುನ್ ಚಕ್ರವರ್ತಿ 2021ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಲ್ಲದೇ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪದ ಹೋರಾಟ ನಡೆಸಿದ್ದರು. ಆದರೆ ಉತ್ತಮ ಸಾಧನೆ ಮಾಡಲು ವಿಫಲವಾಗಿತ್ತು. ಮಿಥುನ್ ಚಕ್ರವರ್ತಿ ಈಗಾಗಲೇ ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕೋಲ್ಕತಾದಲ್ಲಿ ಜನಿಸಿದ ಮಿಥುನ್ ಚಕ್ರವರ್ತಿ 1976ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಮೃಗಾಯ ಚಿತ್ರದ ಮೊದಲ ಚಿತ್ರದಲ್ಲೇ ರಾಷ್ಟ್ರ ಶ್ರೇಷ್ಠ ನಟ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಲ್ಲದೇ ನಂತರ ಎರಡು ಬಾರಿ ಶ್ರೇಷ್ಠ ನಟ ಪ್ರಶಸ್ತಿಗೆ ರಾಷ್ಟ್ರಪ್ರಶಸ್ತಿಗ ಭಾಜನರಾಗಿದ್ದರು. ಇತ್ತೀಚೆಗೆ ಕಾಶ್ಮೀರಿ ಫೈಲ್ಸ್ ಚಿತ್ರದಲ್ಲಿ ನಟಿಸಿದ್ದರು.