Sunday, May 17, 2026
Google search engine
Homeರಾಜ್ಯವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್: 9 ದಿನದ ಬದಲು 11 ದಿನ ಅದ್ಧೂರಿ ಆಚರಣೆ!

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್: 9 ದಿನದ ಬದಲು 11 ದಿನ ಅದ್ಧೂರಿ ಆಚರಣೆ!

ವಿಶ್ವವಿಖ್ಯಾತ ಮೈಸೂರು ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮೈಸೂರು ದಸರಾ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾಗೆ ಚಾಲನೆ ನೀಡಲಾಗುವುದು. ಅಕ್ಟೋಬರ್ 2ರವರೆಗೆ ನಡೆಯಲಿದೆ ಎಂದರು.

ಸಾಮಾನ್ಯವಾಗಿ ಮೈಸೂರು ದಸರಾ 9 ದಿನಗಳ ಕಾಲ ಆಚರಿಸಲಾಗುವುದು. ಆದರೆ ಈ ಬಾರಿ ಅಧಿಕ ಪಂಚಮಿ ಬಂದಿರುವ ಕಾರಣ 11 ದಿನಗಳ ಕಾಲ ದಸರಾ ವಿಜೃಂಬಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಈ ಬಾರಿ ದಸರಾದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ. 21 ದಿನಗಳ ಕಾಲ ಮೈಸೂರಿನಲ್ಲಿ ದೀಪಾಲಂಕಾರ ಇರಲಿದೆ. ಕಳೆದ ಬಾರಿ ದಸರಾ ಆಚರಣೆಗೆ 40 ಕೋಟಿ ರೂ. ಖರ್ಚಾಗಿದ್ದು, ಯಾವುದೇ ಬಿಲ್ ಬಾಕಿ ಉಳಿಸಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಸ್ತು ಪ್ರದರ್ಶನಕ್ಕೆ ಮೊದಲ ದಿನವೇ ಭರ್ತಿ ಆಗುವಂತೆ ನೋಡಿಕೊಳ್ಳಲಾಗುವುದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದರಿಂದ ನೂಕುನುಗ್ಗಲು ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಅಲ್ಲದೇ ಪೊಲೀಸರು ಜನಸ್ನೇಹಿಯಾಗಿ ವರ್ತಿಸುವಂತೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments