ಬಾಲಿವುಡ್ ನಟಿ ಹಾಗೂ ಕನ್ನಡತಿ ದೀಪಿಕಾ ಪಡುಕೋಣೆ ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ದೀಪಿಕಾ ಪಡುಕೋಣೆ ಮತ್ತು ನಟ ರಣ್ವೀರ್ ಸಿಂಗ್ ದಂಪತಿಗೆ ಗೌರಿ- ಗಣೇಶ ಹಬ್ಬದ ಬೆನ್ನಲ್ಲೇ ಹೆಣ್ಣು ಜನಿಸಿದೆ. ಆದರೆ ಕುಟುಂಬದ ಮೂಲಗಳು ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕಿದೆ.
ಮಗು ಮತ್ತು ದೀಪಿಕಾ ಇಬ್ಬರೂ ಆರೋಗ್ಯವಾಗಿದ್ದಾರೆ. ಸೆ.7ರಂದು ಸಂಜೆ ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ.
2018ರಲ್ಲಿ ದೀಪಿಕಾ ಪಡುಕೋಣೆ ಮತ್ತು ರಣಭೀರ್ ಸಿಂಗ್ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಸಿರಿದ್ದರು. ಇಬ್ಬರೂ ಸಿನಿಮಾಗಳಲ್ಲಿ ಬ್ಯೂಸಿ ಆಗಿದ್ದರು. ಗರ್ಭಿಣಿ ಆಗಿದ್ದರೂ ದೀಪಿಕಾ `ಸಿಂಗಂ’ ಸರಣಿ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.