ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ತಿಂಗಳ ನಂತರ ಜೈಲಿನಿಂದ ಹೊರಗೆ ಬರಲಿದ್ದಾರೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ಮಾರ್ಚ್ 21ರಂದು ಬಂಧನಕ್ಕೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಹರಿಯಾಣ ಮತ್ತು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.
ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ದೊರೆಯುತ್ತಿದ್ದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಂಭ್ರಮ ಆಚರಿಸಿದರು. ಇದೇ ವೇಳೆ ಬಿಜೆಪಿ ಜಾಮೀನು ದೊರೆತರೆ ಅಪರಾಧ ಮಾಡಿಲ್ಲ ಅಂತೇನಿಲ್ಲ. ಅಲ್ಲದೇ ಹರಿಯಾಣ ಚುನಾವಣೆಯಲ್ಲಿ ಆಪ್ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಕ್ರಿಯಿಸಿದೆ.