Sunday, May 31, 2026
Google search engine
Homeರಾಜ್ಯಹಾಸನದಲ್ಲಿ ಡೆತ್‌ ನೋಟ್‌ ಬರೆದಿಟ್ಟು ಉಪ ತಹಸೀಲ್ದಾರ್‌ ಆತ್ಮಹತ್ಯೆ

ಹಾಸನದಲ್ಲಿ ಡೆತ್‌ ನೋಟ್‌ ಬರೆದಿಟ್ಟು ಉಪ ತಹಸೀಲ್ದಾರ್‌ ಆತ್ಮಹತ್ಯೆ

ಹಾಸನ: ಡೆತ್‌ ನೋಟ್‌ ಬರೆದಿಟ್ಟು ಉಪ ತಹಸೀಲ್ದಾರ್‌ ಲಾಡ್ಜ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೊಡಗು ಮೂಲದ ತಿಮ್ಮಯ್ಯ (52) ಹಾಸನದ ಬಿ.ಎಂ.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಶನಿವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕಾರ್ಯ ನಿರ್ವಹಿಸಿದ್ದು, ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾ‌ರ್ ಆಗಿ ಕೆಲಸ ಮಾಡುತ್ತಿದ್ದರು.ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವುದು ಬೆಳಕಿಗೆ ಬಂದಿದೆ.

ಡೆತ್‌ನೋಟ್‌ನಲ್ಲಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಡಾವಣೆ ಪೊಲೀಸ್‌ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments