Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ನರಭಕ್ಷಕ ಚಿರತೆಗೆ ಭಕ್ತ ಬಲಿ: ಮಲೆ ಮಹದೇಶ್ವರ ಪಾದಯಾತ್ರೆಗೆ 4 ದಿನ ನಿರ್ಬಂಧ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
male mahadeshwara temple

ಚಾಮರಾಜನಗರ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ಮಂಗಳವಾರ ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.

ಪಾದಯಾತ್ರೆ ಹೊರಟಿದ್ದ ಐವರು  ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಡೆಗೋಡೆಯಿಂದ ಕೆಳಗೆ ಬಿದ್ನಾ, ಇಲ್ಲ ಚಿರತೆ ದಾಳಿ ಮಾಡಿದೆಯಾ? ಎಂಬ ಅನುಮಾನ ಆರಂಭದಲ್ಲಿ ಮೂಡಿತ್ತು. ಆದರೆ ಅಂತಿಮವಾಗಿ ಚಿರತೆ ದಾಳಿಗೆ ಆತ ಬಲಿಯಾಗಿರುವುದು ದೃಢಪಟ್ಟಿದೆ.

ಶವದ ಪಕ್ಕದಲ್ಲಿದ್ದ ನರಭಕ್ಷಕ:

ತಾಳಬೆಟ್ಟದ ಕಂದಕದಲ್ಲಿ ಪ್ರವೀಣ್ ಶವ ಪತ್ತೆಯಾಗಿದ್ದು, ಮಾದಪ್ಪನ ಭಕ್ತನ ಕೊಂದ ನರಭಕ್ಷಕ ಚಿರತೆ ಆತನ ರಕ್ತ ಹೀರಿದೆ. ಸುಮಾರು 1 ಕಿ.ಮೀ. ಕಾಡಿನೊಳಗೆ ಚಿರತೆ ಶವ ಎಳೆದುಕೊಂಡು ಹೋಗಿದ್ದು, ಶವ ಪತ್ತೆ ವೇಳೆಯೂ ಪ್ರವೀಣ್ ಮೃತದೇಹದ ಪಕ್ಕದಲ್ಲೇ ಕುಳಿತಿತ್ತು. ಹೀಗಾಗಿ ಶವ ಹೊರತೆಗೆಯಲು ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಂತಿಮವಾಗಿ ಪಟಾಕಿ ಸಿಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಓಡಿಸಿದ್ದು, ಸದ್ಯ ಮರಣೋತ್ತರ ಪರೀಕ್ಷೆಗಾಗಿ ಹನೂರು ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ.

ಬೆಳಗಿನ ಜಾವ 5.30ಕ್ಕೆ ತೆರಳುವಂತೆ ನಮಗೆ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದರು. ನಾವು 6 ಗಂಟೆ ವೇಳೆಗೆ ಹೋಗುತ್ತಿದ್ದ ವೇಳೆ ಚಿರತೆ ಕಾಣಿಸಿದ್ದು, ಸ್ಥಳದಿಂದ ಓಡಲು ಆರಂಭಿಸಿದ್ದೆವು. ಚಿರತೆ ಚಿರತೆ ಎಂದು ಕಿರುಚಾಡಿದ್ದೆವು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಪಾದಯಾತ್ರೆ 4 ದಿನ ನಿರ್ಬಂಧ:

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಪ್ರವೀಣ್ ಬಲಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಅರಣ್ಯಾಧಿಕಾರಿಗಳು ಆದೇಶಿಸಿದ್ದಾರೆ. ಚಿರತೆ ಹಿಡಿಯುವವರೆಗೆ 4 ದಿನಗಳ ಕಾಲ ಪಾದಯಾತ್ರೆ ನಿರ್ಬಂಧ ಇರಲಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಕೆಲ ದಿನಗಳ ಹಿಂದೆಯೂ ಕಾಣಿಸಿಕೊಂಡಿತ್ತು.

ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತ ದೃಶ್ಯವನ್ನು ಭಕ್ತರು ಮೊಬೈಲ್​​ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment