Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಧಾರವಾಡ: ಕಡ್ಲೆ ಗಿಡ ಕಿತ್ತ ಹುಡುಗರ ಮೇಲೆ ಹಲ್ಲೆ ನಡೆಸಿದ ಮೂವರ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
dharwad dalit boys
dharwad dalit boys

ಕಡ್ಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ನಡೆದಿದೆ.

ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವರ ಮೇಲೆ ಹಲ್ಲೆ ನಡೆದಿದ್ದು, ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕುರಿಗಳಿಗೆ ಹುಲ್ಲು ತರಲು ಹೋದಾಗ ಜಮೀನಿನಲ್ಲಿ ಬೆಳೆದಿದ್ದ ಕಡ್ಲಿ ಗಿಡವನ್ನು ಕಿತ್ತುಕೊಂಡಿದ್ದಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಗ್ರಾಮದ ನಿವಾಸಿಗಳಾದ ಪ್ರವೀಣ ಉಳವಪ್ಪ ಪೊಮೋಜಿ, ಬಸು ರಾಜಪ್ಪ ಪೋಮೋಜಿ, ನಿಂಗಪ್ಪ ರಾಜಪ್ಪ ಪೊಮೋಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತದ್ದಾರ.

ಕರ್ನಾಟಕ ಭೀಮಸೇನೆ ಸಮಿತಿಯ ರಾಜ್ಯಾಧ್ಯಕ್ಷ ಬಿ.ಡಿ.ಮಾದರ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಹುಡುಗರ ಆರೋಗ್ಯ ವಿಚಾರಿಸಿ, ಕುಟುಂಬ ಸದಸ್ಯರಿಗೆ ನೈತಿಕ ಧೈರ್ಯ ತುಂಬಿದರು.

ನಂತರ ಮಾತನಾಡಿದ ಅವರು, ಶತಮಾನಗಳಿಂದ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅದನ್ನು ತಡೆಯಲು ಅನೇಕ ಕಾನೂನುಗಳಿದ್ದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೂಡಲೇ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ನಮ್ಮ ಸ್ವಾಭಿಮಾನವನ್ನು ಕೆದಕುವ ಕೆಲಸ ಮಾಡಬಾರದು. ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಗಳಿಗೆ ಹಾಗೂ ಕುಟುಂಬ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ ಸರ್ಜಾಪುರ ಯುವ ಮುಖಂಡ ಶ್ರೀನಿವಾಸ ಅವರೊಳ್ಳಿ, ಕುಮಾರ ವಕ್ಕುಂದ, ಮಂಜುನಾಥ ಹಡಪದ, ಆನಂದ ಕೊಣ್ಣೂರ, ರಮೇಶ ಮುಳಗುಂದ, ಅಶೋಕ ಶಿರಹಟ್ಟಿ, ಚಂದ್ರಶೇಖರ ಹಿರೇಮಠ, ಮುತ್ತು ಗಡೇಕರ ಸೇರಿದಂತೆ ಇನ್ನಿತರರು ಇದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment