Friday, November 22, 2024
Google search engine
Homeತಾಜಾ ಸುದ್ದಿಎಸ್ ಎಂ ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರ ವಿಶ್ರಾಂತಿಗೆ ಸೂಚನೆ

ಎಸ್ ಎಂ ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರ ವಿಶ್ರಾಂತಿಗೆ ಸೂಚನೆ

ಶ್ವಾಸಕೋಶ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.

ಶಾಸಕ ದಿನೇಶ್ ಗೂಳಿಗೌಡ ಬುಧವಾರ ಈ ವಿಷಯ ಮಾಧ್ಯಮಗಳಿಗೆ ತಿಳಿಸಿದ್ದು, ಶ್ವಾಸಕೋಶ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಎಂ ಕೃಷ್ಣ ಪೂರ್ಣ ಗುಣಮುಖರಾಗಿದ್ದ, 2 ವಾರಗಳ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದರು.

ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೇ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ವೈದ್ಯರ ಸಲಹೆ ಮೇರೆರೆ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರು ಮನವಿ ಮಾಡಿದ್ದಾರೆ. ಹಿರಿಯ ಮುತ್ಸುದ್ದಿ ಎಸ್.ಎಂ.ಕೃಷ್ಣ ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments