Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಅಪರಾಧ

ಬೆಂಗಳೂರಿನಲ್ಲಿ ಕುಡುಕ ಪ್ರಿಯಕರ ಆತ್ಮಹತ್ಯೆಗೆ ನೊಂದು ಪ್ರೇಯಸಿಯೂ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
bengaluru news

ಕುಡಿಯಲು ಪ್ರೇಯಸಿ ಹಣ ನೀಡಲಿಲ್ಲ ಎಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯಕರ ಅತ್ಮಹತ್ಯೆಯಿಂದ ನೊಂದ ಪ್ರೇಯಸಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಲ್ಲುಬಾಳುವಿನಲ್ಲಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಒಡಿಶಾ ಮೂಲದ ಸೀಮಾ ನಾಯಕ್ (25) ಹಾಗೂ ರಾಕೇಶ್ ಪಾತ್ರ (23) ಮೃತಪಟ್ಟ ಪ್ರೇಮಿಗಳು.

ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ, ಗಾಜು ಒಡೆದು ಪರಿಶೀಲನೆ ಮಾಡಿದಾಗ ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್, ಜಿಗಣಿ ಠಾಣೆ ಇನ್ಸ್‌ಪೆಕ್ಟರ್‌ ಮಂಜುನಾಥ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೃತ ರಾಕೇಶ್ ಹಣಕ್ಕಾಗಿ ಪದೇ ಪದೇ ಕುಡಿದು ಜಗಳ ಮಾಡುತ್ತಿದ್ದ. ಭಾನುವಾರ ಸಹ ಹಣಕ್ಕಾಗಿ ಸೀಮಾ ಜೊತೆ ಜಗಳ ಮಾಡಿದ್ದ. ಹಣ ನೀಡುವುದಿಲ್ಲ ಎಂದು ಸೀಮಾ ಮಲಗಿದ್ದಳು. ಬೆಳಿಗ್ಗೆ ಎದ್ದು ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ.

ಹಗ್ಗ ತುಂಡರಿಸಿ ಬದುಕಿಸಲು ಪ್ರಯತ್ನ ಮಾಡಿದಾಗ ಮೃತಪಟ್ಟಿರುವುದು ಖಾತ್ರಿಯಾಗಿದೆ. ಬಳಿಕ ಸೀಮಾ ಕೂಡ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment