Home ಜಿಲ್ಲಾ ಸುದ್ದಿ ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್

ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್

371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ಸಂಸೋಧನಾ ಆಸ್ಪತ್ರೆಯ ಆಸ್ಪತ್ರೆ ಇದೇ ಡಿಸೆಂಬರ್ ತಿಂಗಳ ಅಂತ್ಯಕ್ಕೆ  ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

by Editor
0 comments
sharanu patil

ಕಲಬುರಗಿ: ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಕಲಬುರಗಿ ನಗರದಲ್ಲಿ ಕೆ.ಕೆ.ಅರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ಸಂಸೋಧನಾ ಆಸ್ಪತ್ರೆಯ ಆಸ್ಪತ್ರೆ ಇದೇ ಡಿಸೆಂಬರ್ ತಿಂಗಳ ಅಂತ್ಯಕ್ಕೆ  ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಪ್ರತಿಯೊಂದು ವಿಭಾಗಗಳನ್ನು ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ‌ ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವುದರಿಂದ ಇದೇ ತಿಂಗಳಲ್ಲಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ‌ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಸಭೆ‌ ವಿಪಕ್ಷ‌ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ ಉದ್ಘಾಟನೆಯ ದಿನಾಂಕ ಅಂತಿಮಗೊಳಿಸಲಾಗುವುದು ಎಂದ ‌ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು, ಕಲಬುರಗಿಯನ್ನು ಮೆಡಿಕಲ್‌ ಹಬ್ ಮಾಡುವ ಸರ್ವ ಪ್ರಯತ್ನ ಮುಂದುವರೆದಿದೆ ಎಂದರು.

ನೂತನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಯಂತ್ರೋಪಕರಣಗಳ ಅಳವಡಿಕೆ ಮಾಡಲಾಗಿದ್ದು,ಈ ಭಾಗದ ಜನರಿಗೆ ಇದು ತುಂಬಾ ಅನುಕೂಲವಾಗಲಿದೆ. ಇದೇ ರೀತಿ ಹುಬ್ಬಳ್ಳಿಯಲ್ಲಿ ಸಹ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದ್ದು, ಶೀಘ್ರದಲ್ಲೇ ಅಲ್ಲಿಯೂ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.

banner

441 ಕೋಟಿ ರೂ. ಡಿ.ಪಿ.ಅರ್ ಸಿದ್ಧ:

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ  ಮಂಡಳಿಯಿಂದ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಅನುದಾನ ಖರ್ಚು ಮಾಡಲಾಗುತ್ತಿದೆ. ಪ್ರಮುಖವಾಗಿ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕ.ಕ. ಭಾಗದ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಸಂಬಂಧಪಟ್ಟಂತೆ ನಿರ್ಣಯ ಕೈಗೊಳ್ಳಲಾಗಿದ್ದು, ಇದಕ್ಕಾಗಿ 441 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧವಾಗಿದೆ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು.

ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕೆ.ಕೆ.ಆರ್.ಡಿ.ಬಿ ಮಂಡಳಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು,‌ ಶ್ರೀ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಅಸ್ಪತ್ರೆಯ ನಿರ್ದೇಶಕ ಡಾ.ಕೆ‌.ಎಸ್.ರವೀಂದ್ರನಾಥ, ಕಲಬುರಗಿ ಶಾಖಾ ಆಸ್ಪತ್ರೆಯ ಪ್ರಭಾರಿ ಅಧೀಕ್ಷಕ ಡಾ.ವಿರೇಶ ಪಾಟೀಲ, ಸಮನ್ವಯಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ ‘ಮಹಾ’ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ! ಗೋಲ್ಡನ್ ಟೆಂಪಲ್ ಆವರಣದಲ್ಲಿಯೇ ಪಂಜಾಬ್ ಮಾಜಿ ಡಿಸಿಎಂ ಹತ್ಯೆಗೆ ಯತ್ನ! ಮಹಾರಾಷ್ಟ್ರ ಸಿಎಂ ಹೆಸರು ಘೋಷಿಸದೇ ನಾಳೆ ಪ್ರಮಾಣ ವಚನಕ್ಕೆ ಸಿದ್ಧತೆ! 6,6,6,6,6,6,6: `ಸೂರ್ಯ’ನ ಮುಂದೆ ಶಿವಂ’ ದುಬೆ ರುದ್ರತಾಂಡವ! ಈ ಬಾರಿ ದೇಶದಲ್ಲಿ ಚಳಿಗಾಲದಲ್ಲೂ ಬೀಸಲಿದೆ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಯುಪಿಯ 3 ಡಿಗ್ರಿ ಪದವೀಧರ! ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್! ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ