ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರು ವಿಜಯಪುರದ ಅಲಿಯಾಬಾದ್ ನಿವಾಸಿಗಳು ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಹುಣಸಗಿಯಿಂದ ತಾಳಿಕೋಟೆಗೆ ಪ್ರಯಾಣಿಸುತ್ತಿದ್ದ ಕಾರು ಕಬ್ಬು ಕಟಾವು ಯಂತ್ರದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದ್ದು, ದೇಹಗಳು ಬೇರ್ಪಟ್ಟಿವೆ. ಸ್ಥಳಕ್ಕೆ ಆಗಮಿಸಿದ ತಾಳಿಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.