ಸಕ್ಕರೆ ನಾಡು ಮಂಡ್ಯದಲ್ಲಿ ಶುಕ್ರವಾರ ಬೆಳಿಗ್ಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯಕ್ತ ಚಾಲನೆ ನೀಡಲಾಯಿತು.
ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜಾರೋಹಣ ಮಾಡಿದರೆ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ನೆರವೇರಿಸಿದರು.
ಸಮ್ಮೇಳನದ ಸೃವಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರನ್ನು ಕಲಾ ತಂಡಗಳ ವೈಭವದೊಂದಿಗೆ ಪೂರ್ಣ ಕುಂಭ ಸ್ವಾಗತ ನೀರಿ ಸ್ವಾಗತಿಸಲಾಯಿತು.
ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಇರುವ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಆವರಣದಿಂದ ಮೆರವಣಿಗೆ ಮೂಲಕ ಗೊ.ರು.ಚನ್ನಬಸಪ್ಪ ಅವರನ್ನು ಕನ್ನಡ ರಥದಲ್ಲಿ ನುಡಿಜಾತ್ರೆ ಮೂಲಕ ಕರೆತರಲಾಯಿತು.
ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.