ಆಟವಾಡುತ್ತಿದ್ದಾಗ ಬಲೂನ್ ಊದಲು ಹೋಗಿ ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದೆ.
ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ನವೀನ ನಾರಾಯಣ ಬೆಳಗಾಂವಕರ್ (13) ಮೃತಪಟ್ಟ ಬಾಲಕ.
ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆಸ್ಪತ್ರೆಯಲ್ಲಿ ಆತನಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗದೇ ಉಸಿರುಗಟ್ಟಿ ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾನೆ.
ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.