ಶಿಕ್ಷಕಿಗೆ ನೋಟ್ ಬುಕ್ ತೋರಿಸುತ್ತಿದ್ದಾಗ ಕುಸಿದುಬಿದ್ದ 3ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸೋಮವಾರ ಸಂಭವಿಸಿದೆ.
ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಮೃತಪಟ್ಟಿದ್ದಾರೆ.
ಖಾಸಗಿ ಶಾಲೆಯಲ್ಲಿ ೩ನೇ ತರಗತಿ ಓದುತ್ತಿರುವ ತೇಜಸ್ವಿನಿ ಸೋಮವಾರ ಬೆಳಿಗ್ಗೆ ಶಾಲೆಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ಕುಸಿದುಬಿದ್ದಿದ್ದಾಳೆ. ಅಲ್ಲದೇ ಸ್ಥಳದಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಜೆಎಸ್ ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಅಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಚಾಮರಾಜನಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ಬಾಲಕಿಯ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.