ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್ ಮತ್ತು ಚಿದಾನಂದ, ಮೃತಪಟ್ಟಿದ್ದಾರೆ.
ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.