Home ಕಾನೂನು BREAKING ದಲಿತ ಮಹಿಳೆ ಕೊಲೆಗೈದ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ಕೋರ್ಟ್

BREAKING ದಲಿತ ಮಹಿಳೆ ಕೊಲೆಗೈದ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ಕೋರ್ಟ್

by Editor
0 comments
tumakur court

ದಲಿತ ಮಹಿಳೆಯ ಕೊಲೆ ಪ್ರಕರಣದಲ್ಲಿ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಸುದೀರ್ಘ ವಿಚಾರಣೆ ನಂತರ ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ದಲಿತ ಮಹಿಳೆ ಕೊಲೆ ಪ್ರಕರಣದಲ್ಲಿ ಚಿಕ್ಕನಾಯಕನಹಳ್ಳಿಯ ಪಾಲಪುರ ಗ್ರಾಮದ 21 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದೆ.

ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ.

ನ್ಯಾಯಮೂರ್ತಿ ನಾಗಿರೆಡ್ಡಿ ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾದವರಿಗೆ ತಲಾ 13,500 ರೂ. ದಂಡ ವಿಧಿಸಲಾಗಿದ್ದು, ಒಟ್ಟಾರೆ ದಂಡದ ಮೊತ್ತ 2 ಲಕ್ಷ 83 ಸಾವಿರದ 500 ರೂ. ಆಗಿದೆ. ತಂಡ ತೆರಲು ತಪ್ಪಿದ್ದಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಲಿದೆ ಎಂದು ಸೂಚಿಸಿದ್ದಾರೆ.

banner

ಚಿಕ್ಕನಾಯಕನಹಳ್ಳಿ  ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು.

ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ