Home ಜಿಲ್ಲಾ ಸುದ್ದಿ ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ!

ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ!

ಇನ್ಫೋಸಿಸ್ ಆವರಣ ಸುಮಾರು 350 ಎಕರೆ ವಿಸ್ತೀರ್ಣ ಹೊಂದಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಮಾಡುವುದು ಕಷ್ಟ. ಆದರೂ ಕಾರ್ಯಾಚರಣೆ ನಡೆಯುತ್ತಿದೆ.

by Editor
0 comments
leopard in infosys mysore

ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಉದ್ಯೋಗಿಗಳು ಆತಂಕ್ಕೆ ಒಳಗಾಗಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿಗೆ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ.

ಇನ್ಫೋಸಿಸ್ ಆವರಣದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಬೀದರ್ ನಲ್ಲಿ ಮಂಗಳವಾರ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಚಿರತೆ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋಣ್ ಕ್ಯಾಮರಾ ಬಳಸಲಾಗುವುದು ಎಂದರು.

ಇನ್ಫೋಸಿಸ್ ಆವರಣ ಸುಮಾರು 350 ಎಕರೆ ವಿಸ್ತೀರ್ಣ ಹೊಂದಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಮಾಡುವುದು ಕಷ್ಟ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

banner

ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ.  ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ ಎಂದು ತಿಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Police News: 10 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ 16 ವರ್ಷದ ಬಾಲಕ! ನಿವೃತ್ತಿ ನಿರ್ಧಾರ ಮಾಡಿಲ್ಲ, ಪಂದ್ಯದಿಂದ ಅಷ್ಟೇ: ರೋಹಿತ್ ಶರ್ಮಾ ಬಿಸಿಸಿಐಗೆ ಕಾರ್‍ಯದರ್ಶಿಯಾಗಿ ಜೈ ಶಾ ಸ್ಥಾನಕ್ಕೆ ಸೈಕಿಯಾ ಆಯ್ಕೆ? ಡಿಎಂಕೆ ಸಂಸದ ಕತಿರ್ ಆನಂದ್ ದಾಳಿ: ತಮಿಳುನಾಡಿನಲ್ಲಿ ಇಡಿ ಸರಣಿ ದಾಳಿ! ಕಂದಕಕ್ಕೆ ಬಿದ್ದ ಸೇನಾ ವಾಹನ: 4 ಯೋಧರ ದುರ್ಮರಣ ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ FIR ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಅನಗತ್ಯ: ಸುಪ್ರೀಂಕೋರ್ಟ್ ನಟ ದರ್ಶನ್ ಬೆನ್ನುನೋವಿನ ಶಸ್ತ್ರಚಿಕಿತ್ಸೆಗೆ ಮುಹೂರ್ತ ಫಿಕ್ಸ್: ವೈದ್ಯ ಅಜಯ್ ಹೆಗ್ಡೆ ಮಾಹಿತಿ ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್​ ವಿರುದ್ಧ ಪರವೇಶ್ ಕಣಕ್ಕೆ ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಇನ್ನಿಲ್ಲ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಯೋಧರ ದುರ್ಮರಣ, ಇಬ್ಬರಿಗೆ ಗಾಯ