Home ಜಿಲ್ಲಾ ಸುದ್ದಿ ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಪಾರ್ಕ್ ಸ್ಥಾಪನೆ!

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಪಾರ್ಕ್ ಸ್ಥಾಪನೆ!

ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ.

by Editor
0 comments
mb patil

ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿದಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆ ಆಕರ್ಷಿಸಲಿದ್ದೇವೆ ಎಂದು ಹೇಳಿದ್ದಾರೆ.

ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು. ಆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.

banner

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಅವರು ನುಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಸುತ್ತಮುತ್ತ ಈಗಾಗಲೇ ಸಕ್ರಿಯವಾಗಿರುವ ಜೀನ್ಸ್ ಉಡುಪು ತಯಾರಿಕೆ ಘಟಕಗಳಿಗೂ ಹೆಚ್ಚಿನ ನೆರವು ನೀಡಲಾಗುವುದು. ಜೀನ್ಸ್ ಉಡುಪುಗಳು ಯುವಜನಾಂಗಕ್ಕೆ ಅಚ್ಚುಮೆಚ್ಚಿನದಾಗಿವೆ. ಇಲ್ಲಿರುವ ಮಾರುಕಟ್ಟೆಯನ್ನು ನಾವು ಗುರಿಯಾಗಿಟ್ಟುಕೊಂಡು, ದಾಪುಗಾಲಿಡಲಿದ್ದೇವೆ. ರಾಜ್ಯದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯು ಇದಕ್ಕೆ ಮತ್ತಷ್ಟು ಇಂಬು ಕೊಡಲಿದೆ ಎಂದು ಸಚಿವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಬೇಕೆಂಬುದು ರಾಹುಲ್ ಗಾಂಧಿಯವರು ಕೊಟ್ಟ ಮಾತಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಳೆದ ಬಜೆಟ್ಟಿನಲ್ಲಿ ಇದನ್ನು ಘೋಷಿಸಿದ್ದರು. ಈಗ ಇದಕ್ಕೆ ಮುಂದಡಿ ಇಡಲಾಗಿದೆ. ಜವಳಿ ಇಲಾಖೆಯ ಸಹಕಾರ, ಸಲಹೆಗಳನ್ನೂ ಪಡೆದುಕೊಂಡು, ಅಲ್ಲಿ ಈಗಾಗಲೇ ಇರುವ ಯೋಜನೆಗಳ ಪ್ರಯೋಜನವನ್ನೂ ಜೀನ್ಸ್ ಘಟಕಗಳಿಗೆ ತಲುಪಿಸಲಾಗುವುದು ಎಂದು ಅವರು ಹೇಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
SHOCKING: 69 ಉಗ್ರರಿರುವ ಜೈಲಿನಲ್ಲಿ ಹಾರಾಡಿದ ಡ್ರೋಣ್: 8 ದಿನಗಳ ನಂತರ ಪತ್ತೆ! 2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ! ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಯುವತಿ ಕೊಲೆಗೈದ ಸಹದ್ಯೋಗಿ: ರಕ್ಷಿಸಲು ಬಾರದ ಜನ! ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ! 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ! ಶ್ರೀರಂಗಪಟ್ಟಣ-ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ 2ನೇ ಬಾರಿ ನೋಟಿಸ್ ಜಾರಿ ಬೆನ್ನಲ್ಲೇ ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!