Home ಜಿಲ್ಲಾ ಸುದ್ದಿ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಸಲಿರುವ ರಾಜ್ಯ ಸರ್ಕಾರ!

ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಸಲಿರುವ ರಾಜ್ಯ ಸರ್ಕಾರ!

ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ 7 ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

by Editor
0 comments
kj george

ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ 7 ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

ಮಂಡ್ಯದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ವಿದ್ಯುತ್ ಬೇಡಿಕೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರಲ್ಲದೆ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇ. 30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

banner

ಕುಸುಮ್- ಸಿ ಗೆ ಭೂಮಿ ನೀಡಲು ಸೂಚನೆ:

ಕುಸುಮ್-ಸಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 59 ಸಬ್ ಸ್ಟೇಷನ್ ಗಳಿದ್ದು, ಈ ಪೈಕಿ 37 ಕಡೆ ಫೀಡರ್ ಸೋಲರೈಸೇಷನ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ನಾಲ್ಕು ಯೋಜನೆಗಳ ಕೆಲಸ ಆರಂಭವಾಗಿದೆ. ಉಳಿದವುಗಳಿಗೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸಿ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ಪೂರೈಸುವ ಕಾರ್ಯ ಮಾಡಬೇಕಾಗಿರುವುದರಿಂದ ಲಭ್ಯವಿರುವ ಸರ್ಕಾರಿ ಭೂಮಿಯನ್ನು ತ್ವರಿತವಾಗಿ ಒದಗಿಸುವಂತೆ ಸಭೆಯಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚಿಸಿದರು.

ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆಯಡಿ 2023ರ ಸೆಪ್ಟೆಂಬರ್ ವರೆಗೆ 1,21,164 ಅರ್ಜಿಗಳು ಬಂದಿದ್ದು, 1,15,794 ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ 5,571 ಅರ್ಜಿಗಳನ್ನು ಮೂರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು. ಆ ಬಳಿಕ ಅಕ್ರಮ-ಸಕ್ರಮಕ್ಕೆ 1,600 ಮಂದಿ ಅರ್ಜಿ ಸಲ್ಲಿಸಿದ್ದು, ಹಳೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸ ಅರ್ಜಿಗಳ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೇಸಿಗೆಯಲ್ಲಿ ವಿದ್ಯುತ್ ಖರೀದಿ:

ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಈ ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಯೋಜನೆ ರೂಪಿಸಲಾಗಿದೆ. ದೀರ್ಘಾವದಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ. ಹೀಗಾಗಿ ಹೆಚ್ಚುವರಿ ವಿದ್ಯುತ್ತನ್ನು ಪೀಕ್ ಅವರ್ ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಇಲಾಖೆಗೂ ಲಾಭವಾಗುತ್ತದೆ ಎಂದು ತಿಳಿಸಿದರು.

ಜನಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿರಬೇಕು:

ಸಭೆಯಲ್ಲಿ ಹಜರಿದ್ದ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, “ಜನರು ಸಾಮಾನ್ಯವಾಗಿ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳೊಂದಿಗೆ ಹೇಳಿಕೊಳ್ಳುತ್ತಾರೆ. ಆದ್ದರಿಂದ ಜನಪ್ರತಿನಿಧಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ಸ್ಪಷ್ ಅರಿವಿರುತ್ತದೆ. ಹೀಗಾಗಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಆಧರಿಸಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ‌, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ. ಮತ್ತಿತರರು ಹಾಜರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಶೇ.16ರಷ್ಟು ಕುಸಿದ ಉತ್ಪಾದನೆ: ದುಬಾರೆಯಾಗಲಿದೆ ಸಕ್ಕರೆ ದರ! ಮಹಿಳೆಯರ ದೇಹದ ಆಕಾರ ಅಪಹಾಸ್ಯ ಶಿಕ್ಷಾರ್ಹ ಅಪರಾಧ: ಕೋರ್ಟ್ ಮಹತ್ವದ ತೀರ್ಪು ಬೆಂಗಳೂರು-ತುಮಕೂರು-ರಾಮನಗರ ವರ್ತುಲ ರಸ್ತೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಮ್ಮತಿ ಶರಣಾದ 6 ಮಂದಿ‌ ನಕ್ಸಲರ ಸಶಸ್ತ್ರ ಹೋರಾಟದ ಹಿಂದಿನ ನೋವಿನ ಕಥೆ ಏನು ಗೊತ್ತಾ? ಮಂಗಳೂರಿನಲ್ಲಿ ಸಮುದ್ರಪಾಲಾದ ಬೆಂಗಳೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು! ಸಿಎಂ ಸಮ್ಮುಖದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು: 24 ವರ್ಷಗಳಲ್ಲೇ ಇದೇ ಮೊದಲು! ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್! ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ! ಬೆಂಗಳೂರಿನಲ್ಲಿ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳ ಕೊಂದ ಪತಿ! ದೇಶಾದ್ಯಂತ ವಾಹನ ಅಪಘಾತದ ಗಾಯಾಳುಗಳಿಗೆ ಉಚಿತ ಚಿಕಿತ್ಸೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ