Home ಜಿಲ್ಲಾ ಸುದ್ದಿ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

by Editor
0 comments
mb patil

ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸಾಬೂನು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಎಸ್ ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದರು.

ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, ವಿಜಯಪುರದಲ್ಲಿ ಕೂಡ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು. ಶಾಸಕ ಬಸವರಾಜ ಯತ್ನಾಳ ಕೂಡ ಸಚಿವರು ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು.

ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕ ಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರ ಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

banner

ಕೆಎಸ್ಡಿಎಲ್ ಮೊದಲು ನಷ್ಟದಲ್ಲಿತ್ತು. ಈಗ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದ್ದು, ಸಂಸ್ಥೆಯು ಲಾಭದ ಹಳಿಗೆ ಬಂದಿದೆ. ಜತೆಗೆ ತಾವು ಸಚಿವರಾದ ಮೇಲೆ ಗುಣಮಟ್ಟದ 20 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸಂಸ್ಥೆಯ ಗತವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಿರಾಣಿ ಅಂಗಡಿ, ವಿಮಾನ ನಿಲ್ದಾಣ, ವಿದೇಶಗಳ ಮಳಿಗೆ ಹೀಗೆ ಎಲ್ಲ ಕಡೆಯೂ ಮೈಸೂರು ಸ್ಯಾಂಡಲ್ ಸೋಪ್ ಮತ್ತು ಸಂಸ್ಥೆಯ ಇತರ ಉತ್ಪನ್ನಗಳು ದೊರೆಯುವಂತೆ ಮಾಡಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯದ ವಿಶಿಷ್ಟ ಉತ್ಪನ್ನಗಳ ಮಾರಾಟಕ್ಕೆಂದೇ ಕಲಾಲೋಕ ಮಳಿಗೆ ಸ್ಥಾಪಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಸಂಸ್ಥೆಯ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಪಿ ಕೆ ಎಂ ಪ್ರಶಾಂತ್, ಜಿಲ್ಲಾಧಿಕಾರಿ ಭೂಪಾಲನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ಋಷಿ ಆನಂದ್ ಮುಂತಾದವರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಗೌತಮ್ ಜೊತೆ ಬಿಸಿಸಿಐ ಸಭೆ: ರೋಹಿತ್-ಕೊಹ್ಲಿ ಭವಿಷ್ಯ ನಿರ್ಧಾರ? 10ನೇ ತರಗತಿಯ 80 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಿನ್ಸಿಪಾಲ್! ವಿಜಯ್ ಹಜಾರೆ ಟ್ರೋಫಿ: ರೋಚಕ ಜಯ ಸಾಧಿಸಿ ಕರ್ನಾಟಕ ಸೆಮೀಸ್ ಗೆ ಲಗ್ಗೆ ಕೆಎಲ್ ರಾಹುಲ್ ರಜೆ ಮನವಿ ತಿರಸ್ಕರಿಸಿದ ಬಿಸಿಸಿಐ: ಇಂಗ್ಲೆಂಡ್ ಸರಣಿಗೆ ಸಜ್ಜಾಗಲು ಸೂಚನೆ RCB ನಾಯಕನಾಗಿ ಕೊಹ್ಲಿ ಡೌಟ್, ಹೊಸ ನಾಯಕನ ಹುಡುಕಾಟದಲ್ಲಿ ಆರ್ ಸಿಬಿ! 2025ರಲ್ಲಿ ಕುಸಿಯಲಿದೆ ಭಾರತದ ಆರ್ಥಿಕತೆ: ಐಎಂಎಫ್ ಎಚ್ಚರಿಕೆ ಮಹಾರಾಷ್ಟ್ರ ಪಂಚಾಯಿತಿ ಚುನಾವಣೆ: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು? ದಿಲ್ಲಿ ಮದ್ಯ ನೀತಿಯಿಂದ 2,026 ಕೋಟಿ ಸರ್ಕಾರಕ್ಕೆ ನಷ್ಟ: ಸಿಎಜಿ ವರದಿ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ