Thursday, September 19, 2024
Google search engine
Homeಜಿಲ್ಲಾ ಸುದ್ದಿಒಂದೇ ದಿನ 848 ನಿವೇಶನ ಖಾತೆ ಮಾಡಿಕೊಂಡ ಮುಡಾ ಮಾಜಿ ಅಧ್ಯಕ್ಷ!

ಒಂದೇ ದಿನ 848 ನಿವೇಶನ ಖಾತೆ ಮಾಡಿಕೊಂಡ ಮುಡಾ ಮಾಜಿ ಅಧ್ಯಕ್ಷ!

ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ತಮ್ಮ ಹೆಸರಿಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮುಡಾದಲ್ಲಿ ಭ್ರಷ್ಟಾಚಾರ ತನಿಖೆ ನಡೆಯುತ್ತಿದ್ದಂತೆ ಒಂದೊಂದೇ ಹಗರಣಗಳು ಬೆಳಕಿಗೆ ಬರುತ್ತಿದೆ. 2022, ಫೆಬ್ರವರಿ 22ರಂದು ಒಂದೇ ದಿನದಲ್ಲಿ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ 848 ನಿವೇಶನಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿರುವ ಬಗ್ಗೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಅಂದಿನ ಮುಡಾ ಆಯುಕ್ತ ನಟೇಶ್ ಪತ್ರ ಬರೆದಿದ್ದಾರೆ.

ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಅನುಮೋದನೆ ಸಿಕ್ಕಿದೆ.

252 ಎಕರೆ ಜಾಗದ ಕೆಲವು ಸರ್ವೆ ನಂಬರ್‌ಗಳು ವ್ಯಾಜ್ಯ ನ್ಯಾಯಾಲಯದಲ್ಲಿದೆ. ಹೀಗಾಗಿ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ವರ್ಗಾವಣೆ ಮಾಡಬಾರದೆಂದು ಆದೇಶವಿದೆ. ಹೀಗಿದ್ದರೂ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದ ಹೆಚ್.ವಿ.ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ ಮುಡಾದಿಂದ ಬಿಡುಗಡೆಗೊಳಿಸಿ ತಮ್ಮ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಆಯುಕ್ತರ ಅನುಮೊದನೆ ಇಲ್ಲದಿದ್ದರೂ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ ಎಂದು ಆಯುಕ್ತರು ಪತ್ರದಲ್ಲಿ ಆರೋಪಿಸಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯ ಮುಡಾ ಸೈಟ್ ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಿದ್ದು, ವರ್ಷಾನುಗಟ್ಟಲೆಯಿಂದ ನಡೆದು ಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ನಡೆದಿರುವುದು ಬೆಳಕಿಗೆ ಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments