ಯುವಕನೊಬ್ಬ ಬಾಲ ಹಿಡಿದು ಚಿರತೆಯನ್ನು ಬೋನಿಗೆ ಹಾಕಿ ಸಾಹಸ ಮೆರೆದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಆನಂದ್ ಧೈರ್ಯಕ್ಕೆ ಸ್ವತಃ ಅರಣ್ಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ.
ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಮಂಗಳವಾರ ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸಕಲ ಸಿದ್ದತೆಯೊಂದಿಗೆ ಸ್ಥಳಕ್ಕೆ ಆಗಮಿಸಿದರು.
ಚಿರತೆ ಸೆರೆಹಿಡಿಯಲಾಗದೇ ಸಿಬ್ಬಂದಿ ಕೈಚೆಲ್ಲಿ ಕುಳಿತಿದ್ದಾಗ ಗ್ರಾಮದ ಆನಂದ್ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ.
5 ವರ್ಷದ ಚಿರತೆಯನ್ನು ಯುವಕ ಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


