ಓವರ್ ಟೇಕ್ ಮಾಡುವ ಆತುರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಮೂವರು ಐಐಟಿ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸಂಭವಿಸಿದೆ.
ಶನಿವಾರ ಬೆಳಿಗ್ಗೆ ಮಳವಳ್ಳಿ ಸಮೀಪದ ಬೋಸೇನಗೌಡನದೊಡ್ಡಿ ಬಳಿ ಓವರ್ ಟೇಕ್ ಮಾಡುವ ಆತುರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಮೂವರು ಐಐಟಿ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸಂಭವಿಸಿದೆ.ಅಪಘಾತ ಸಂಭಿಸಿದ್ದು, ಬೆಂಗಳೂರಿನಲ್ಲಿ ಐಐಟಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣವ್, ಆಕಾಶ್, ಆರ್ದಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಪೃಥ್ವಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರ ಶವಗಳನ್ನು ಮಳವಳ್ಳಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡಿರುವ ಪೃಥ್ವಿಯನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೀಕೆಂಡ್ ಕಳೆಯಲು ಕಾರಿನಲ್ಲಿ ಹೊರಟ್ಟಿದ್ದ ವಿದ್ಯಾರ್ಥಿಗಳು ಕೆಎಸ್ಸಾರ್ಟಿ ಬಸ್ ಓವರ್ ಟೇಕ್ ಮಾಡಲು ಯತ್ನಿಸಿದಾಗ ಎದುರಿನಿಂದ ಬಂದ ಲಾರಿಗೆ ಡಿಕ್ಕಿ ಹೊಡೆದಿದೆ.
ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಗೊಂಡಿರುವ ಲಾರಿ ಚಾಲಕನಿಗೂ ಚಿಕಿತ್ಸೆ ನೀಡಲಾಗಿದೆ.