ಹಾಸನ: ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್ (22) ಶಂಕರ್ (45) ಮೃತಪಟ್ಟವರು, ಸಕಲೇಶಪುರದಲ್ಲಿ ನಡೆಯುತ್ತಿರುವ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಗಿಸಿ ವಾಪಸ್ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಹೋಗುವಾಗ ಹಿಂದಿನಿಂದದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ,ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗವೇ ಕಾರಣವಾಗಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ವೃತ್ತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರದ ಕ್ರಫಡ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.