ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ ಹಾಗೂ ಮಲ್ಲೇಶ್ ಮೃತಪಟ್ಟಿದ್ದಾರೆ.
ರಾತ್ರಿ ಊಟ ಮಾಡಿ ಬೈಕ್ ನಲ್ಲಿ ಜಮೀನಿಗೆ ತೆರಳಿದ್ದ ನಾಗೇಂದ್ರ ಮತ್ತು ಮಲ್ಲೇಶ್ ಮನೆಗೆ ಮರಳುತ್ತಿದ್ದಾಗ ರಸ್ತೆ ಮಧ್ಯೆ ಜೋತು ಬಿದ್ದಿದ್ದ ತುಂಡಾಗಿ ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ಕುತ್ತಿಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ ಈ ಘಟನೆ ಸಂಭವಿಸಿದ್ದರೂ ಯಾರ ಗಮನಕ್ಕೂ ಬಂದಿರಲಿಲ್ಲ. ಶುಕ್ರವಾರ ಬೆಳಿಗ್ಗೆ ಹೊಲಗದ್ದೆಗಳಿಗೆ ತೆರಳಲು ಬಂದ ಗ್ರಾಮದ ರೈತರಿಗೆ ರಸ್ತೆ ಮಧ್ಯೆ ವಿದ್ಯುತ್ ತಂತಿಗೆ ಸಿಲುಕಿ ಇವರಿಬ್ಬರು ಸಿಲುಕಿ ಮೃತಪಟ್ಟಿರುವುದು ನೋಡಿದ್ದಾರೆ.
ವಿದ್ಯುತ್ ತಂತಿಗಳು ಸಡಿಲಗೊಂಡಿದ್ದು, ರಾತ್ರಿ ಗಾಳಿ ಮಳೆಯ ಪರಿಣಾಮ ವಿದ್ಯುತ್ ತಂತಿ ತುಂಡಾಗಿ ರಸ್ತೆ ಮಧ್ಯದಲ್ಲಿಯೇ ಜೋತು ಬಿದ್ದಿತ್ತು. ಜಮೀನಿನಿಂದ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ಜೋತು ಬಿದ್ದ ವಿದ್ಯುತ್ ತಂತಿಗೆ ರೈತರ ಕುತ್ತಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಅಕ್ಕಪಕ್ಕದ ಗ್ರಾಮಗಳ ರೈತರು, ರೈತ ಸಂಘದ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಚೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು. ಸರಿಯಾಗಿ ವಿದ್ಯುತ್ ತಂತಿಗಳ ನಿರ್ವಹಣೆ ಮಾಡದೇ ಇರುವುದು ಈ ದುರಂತಕ್ಕೆ ಕಾರಣವಾಗಿದೆ ಎಂದು ಹರಿಹಾಯ್ದಿದ್ದಾರೆ.