Friday, April 25, 2025
Google search engine
Homeಜಿಲ್ಲಾ ಸುದ್ದಿಸಾಲಬಾಧೆ ತಾಳಲಾರದೇ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮಾಸ್ತಪ್ಪ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಮಂಡ್ಯದ ಯಲಿಯೂರು ಬಳಿ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತೊಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments