ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಮ್ಮ ಶಾಸಕರು ಹಾಗೂ ಸಚಿವರ ಪಾತ್ರವಿಲ್ಲ ಎಂಬುದು ನಿಜವಾಯಿತಲ್ಲ. ಇದರ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಆರೋಪಿಗಳಾದ ಲೆಕ್ಕ ಪರಿಶೋಧಕ ಪರಶುರಾಮ್- ಎಂಡಿ ಪದ್ಮನಾಭ್ ರಹಸ್ಯವಾಗಿ ಮಾತನಾಡಿರುವ ಆಡೀಯೋ ವೈರಲ್ ಆಗಿರುವ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು.
ನಿಗಮದ ಅಧ್ಯಕ್ಷರಾಗಿದ್ದ ನಾಗೇಂದ್ರ ಹಗರಣದಲ್ಲಿ ಮೊದಲಿನಿಂದಲೂ ನನ್ನ ಪಾತ್ರವಲ್ಲ ಎಂದು ಹೇಳುತ್ತಲೇ ಬಂದಿದ್ದರು. ಆದರೆ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ಪಂದಿಸುವುದಾಗಿ ಹೇಳಿ ರಾಜೀನಾಮೆ ನೀಡಿದ್ದರು ಎಂದು ಅವರು ಹೇಳಿದರು.
ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ನಾನು ತನಿಖೆ ನಡೆಸಲು ಪೊಲೀಸರಿಗೆ ಪೂರ್ಣ ಸ್ವಾತಂತ್ರ ನೀಡಿದ್ದೇವೆ. ಯಾವುದೇ ಒತ್ತಡ ಹಾಕುವ ಕೆಲಸ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.