Wednesday, June 3, 2026
Google search engine
Homeರಾಜ್ಯಸಿಎಂ ಆಗುತ್ತಿದ್ದಂತೆ 6 ಪ್ರಮುಖ ಘೋಷಣೆ ಮಾಡಿದ ಡಿಕೆ ಶಿವಕುಮಾರ್

ಸಿಎಂ ಆಗುತ್ತಿದ್ದಂತೆ 6 ಪ್ರಮುಖ ಘೋಷಣೆ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6 ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ.
ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಬಸ್ ಪಾಸ್, ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆ, 56 ಸಾವಿರ ಉದ್ಯೋಗ ಭರ್ತಿ ಪ್ರಕ್ರಿಯೆ ಶೀಘ್ರ ಆರಂಭ, ಬಿ ಖಾತಾದಿಂದ ಎ ಖಾತೆಗೆ ಭೂ ಪರಿವರ್ತನೆ, ಖಾಸಗಿ ಉದ್ಯೋಗಿ ನೋಂದಣಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.

ರಾಜ್ಯದಲ್ಲಿ ಈ ಮೊದಲು ವಿವಿಧ ಮಾದರಿಯ ವಿದ್ಯಾರ್ಥಿಗಳಿಗೆ 1,300 ರೂ.ದಿಂದ 1,500 ರೂ ವಾರ್ಷಿಕ ಬಸ್ ಪಾಸ್ ದರ ನಿಗದಿಪಡಿಸಲಾಗಿತ್ತು. ಈಗ ಎಲ್ಲಾ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲಿದ್ದಾರೆ ಎಂದು ಅವರು ಹೇಳಿದರು.

“ಇದು ಯುವಯುಗ. ಕೇವಲ ಹುಡುಗಿಯರಿಗೆ ಉಚಿತ ಬಸ್ ಏಕೆ ಎಂದು ವಿದ್ಯಾರ್ಥಿಗಳು ಕೇಳುತ್ತಿದ್ದರು. ನಾವು ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಬಸ್ ಪಾಸ್‌ಗಳನ್ನು ನೀಡಲಿದ್ದೇವೆ. ಇದು ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ’ ಎಂದು ಸಿಎಂ ಸ್ಪಷ್ಟಪಡಿಸಿದರು.

“ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿಗಳು ಸರ್ಕಾರದಲ್ಲಿ ನೋಂದಾಯಿಸಿಕೊಳ್ಳಬೇಕು. ನಾವು ಕಂಪನಿಗಳೊಂದಿಗೆ ಮಾತನಾಡಿ ಅವರಿಗೆ ಅಗತ್ಯವಿರುವ ಉದ್ಯೋಗಗಳನ್ನು ಒದಗಿಸಲು ವ್ಯವಸ್ಥೆ ಮಾಡುತ್ತೇವೆ. ಉದ್ಯೋಗಕ್ಕಾಗಿ ಯುವ ಸಮುದಾಯಕ್ಕೆ ಸರ್ಕಾರವೇ ತರಬೇತಿ ನೀಡುತ್ತದೆ” ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.

ಗ್ರಾಮಗಳಲ್ಲಿ ಭಾರತ್ ಜೋಡೋ ಯುವಕರ ಸಂಘ ರಚಿಸಲು ನಿರ್ಧರಿಸಲಾಗಿದೆ. ಈ ಯುವ ಸಂಘಗಳಿಗೆ ಸರ್ಕಾರ 10 ಲಕ್ಷ ರೂ.ಗಳನ್ನು ನೀಡಲಿದೆ. ಇತರ ಕೆಟ್ಟ ಅಭ್ಯಾಸಗಳಿಗೆ ಆಶ್ರಯಿಸದೆ, ಯುವಕರು ಸಮಾಜ ಕಟ್ಟುವ ಕೆಲಸದಲ್ಲಿ ನಿರತರಾಗಬೇಕು ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. 10 ಸಾವಿರ ಭಾರತ್ ಜೋಡೋ ಯುವಕರ ಸಂಘಗಳನ್ನು ರಚಿಸುವುದು ನಮ್ಮ ಗುರಿಯಾಗಿದೆ ಎಂದು ನೂತನ ಸಿಎಂ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments