Monday, June 8, 2026
Google search engine
Homeರಾಜಕೀಯಮೋದಿ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಎಂತೆಂಥಾ ಮಾತನಾಡಿದ್ದಾರೆ ಗೊತ್ತಾ?: ಸಿದ್ದರಾಮಯ್ಯ

ಮೋದಿ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಎಂತೆಂಥಾ ಮಾತನಾಡಿದ್ದಾರೆ ಗೊತ್ತಾ?: ಸಿದ್ದರಾಮಯ್ಯ

ದಾವಣಗೆರೆ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಛಲುವಾದಿ ನಾರಾಯಣಸ್ವಾಮಿ ಬಿಜೆಪಿ, ಆರ್ ಎಸ್‌ಎಸ್ ಮತ್ತು ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿ ಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ   ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಜಮೀರ್ ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಪಕ್ಷದ ಸಿಪಾಯಿ. ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್ ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಛಲವಾದಿ ನಾರಾಯಸ್ವಾಮಿ ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ.  ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19ಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments