Thursday, May 14, 2026
Google search engine
Homeರಾಜ್ಯಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ರಾಯಚೂರು ಜಿಲ್ಲಾ ಪ್ರವಾಸದ ವೇಳೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಮಧ್ಯರಾತ್ರಿವರೆಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ.

ಯಾದಗಿರಿಯ ಬಂಡೊಳ್ಳಿ ವಾಲ್ಮೀಕಿ ಪೀಠದ ಸ್ಥಳ, ರಾಯಚೂರಿನ ತಿಂಥಣಿ ಕನಕಗುರು ಪೀಠಕ್ಕೆ ಭೇಟಿ ನೀಡಿದ್ದರು. ಬಳಿಕ ಲಿಂಗಸುಗೂರಿನ ಹಟ್ಟಿಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಲಘು ಹೃದಯಾಘಾತವಾಗಿದೆ.
ಬೆಳಗ್ಗೆ ಲವಲವಿಕೆಯಿಂದ ಓಡಾಡಿಕೊಂಡಿದ್ದ ಸ್ವಾಮಿಜಿಗೆ ರಾತ್ರಿವೇಳೆ ಎದೆ ನೋವು ಕಾಣಿಸಿಕೊಂಡಿದೆ.

ರಾಯಚೂರಿನಲ್ಲಿ ಆಸ್ಪತ್ರೆಗೆ ದಾಖಲಾದ ವೇಳೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ, ಶಿವರಾಜ್ ಪಾಟೀಲ್ ಮಾಜಿ ಸಂಸದ ಬಿವಿ ನಾಯಕ್ ಆಸ್ಪತ್ರೆಗೆ ತೆರಳಿ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ. ಸ್ವಾಮಿಜಿ ಸದ್ಯ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments