ಕಡೆ ಕಾರ್ತಿಕ ಸೋಮವಾರವಾದ ಇಂದು ಇತಿಹಾಸ ಪ್ರಸಿದ್ಧ ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ದೊರೆತಿದೆ.
ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸುವ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗಿದ್ದು, ಇದೇ ಮೊದಲ ಬಾರಿಗೆ ಪರಿಷಗೆ ಬಂದ ಕಡಲೆಕಾಯಿ ವ್ಯಾಪಾರಿಗಳಿಗೆ ತೆರಿಗೆ ವಿಧಿಸದೇ ಶುಲ್ಕ ವಿನಾಯಿತಿ ನೀಡಲಾಗಿದೆ.
ಮೊದಲ ಬಾರಿ ರಾಮಕೃಷ್ಣ ಆಶ್ರಮ ವೃತ್ತ ಗಣೇಶ ಭವನ್ ವೃತ ಹಾಗೂ ಸುತ್ತಮುತ್ತಲಿನ ರಸ್ತೆಗಳೆಲ್ಲ ವಿಜೃಂಭಣೆಯ ದೀಪಾಲಂಕಾರ ಮಾಡಲಾಗಿದೆ. ಸಂಜೆ 6:15ಕ್ಕೆ ಕೆಂಪಾಬುದಿ ಕೆರೆಯಲ್ಲಿ ವಿಶೇಷ ತೆಪ್ಪೋತ್ಸವ ನಡೆಯಲಿದೆ. ಬಸವನ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ವಿಶೇಷ ಸಾಲಿನ ದರ್ಶನ ವ್ಯವಸ್ಥೆ ಹಾಗೂ ಹಿರಿಯರಿಗೆ ವಿಶೇಷ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ.
ಕಡಲೆಕಾಯಿ ಪರಿಷೆಗೆ ವ್ಯಾಪಾರಕ್ಕಾಗಿ ಚಿಂತಾಮಣಿ, ಮಾಗಡಿ, ಕೋಲಾರ, ತುಮಕೂರು, ಆಂಧ್ರ, ತಮಿಳುನಾಡು, ರಾಮನಗರ, ಚಿತ್ರದುರ್ಗ ಸೇರಿದಂತೆ ಹಲವೆಡೆಯಿಂದ 3 ಸಾವಿರಕ್ಕೂ ಹೆಚ್ಚು ವ್ಯಾಪಾರಸ್ಥರು ಆಗಮಿಸಿದ್ದಾರೆ.
ಈ ವರ್ಷ ಕಡೆಕಾಯಿ ಬೆಲೆ ಕೆಜಿಗೆ 50ರಿಂದ 70 ರೂ. ಇದೆ. ಸಾಮಾನ್ಯವಾಗಿ ಸೇರಿಗೆ ೨೦ ರೂ.ನಂತೆ ಮಾರಾಟವಾಗುತ್ತಿದ್ದ ಕಡಲೆಕಾಯಿ ಶುಲ್ಕ ವಿನಾಯಿತಿಯಿಂದ ವ್ಯಾಪಾರಿಗಳು ಸಂತಸಗೊಂಡಿದ್ದಾರೆ.