Sunday, June 14, 2026
Google search engine
Homeಅಪರಾಧಬೆಂಗಳೂರಿನಲ್ಲಿ 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: 19 ಮಂದಿ‌ ಅರೆಸ್ಟ್

ಬೆಂಗಳೂರಿನಲ್ಲಿ 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: 19 ಮಂದಿ‌ ಅರೆಸ್ಟ್

ಬೆಂಗಳೂರು:‌ ಡಗ್ಸ್ ಮಾರಾಟ ಮಾಡುತ್ತಿದ್ದ 14 ವಿದೇಶಿ ಪ್ರಜೆಗಳ ಸಹಿತ ಒಟ್ಟು 19 ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 7.7 ಕೋಟಿ ರೂ ಮೌಲ್ಯದ ಮಾದಕ ಪದಾರ್ಥ ವಶಪಡಿಸಿಕೊಂಡಿದ್ದಾರೆ.

ಸುದ್ದಗಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ ಮೂಲದ ಮಹಿಳಾ ಆರೋಪಿಯನ್ನ ಬಂಧಿಸಿ 1.52 ಕೋಟಿ ಮೌಲ್ಯದ 760 ಗ್ರಾಂ ಎಂಡಿಎಂಎ, ಕ್ರಿಸ್ಟಲ್, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ.

ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಐವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 60 ಲಕ್ಷ ಮೌಲ್ಯದ 600 ಗ್ರಾಂ ಹೈಡ್ರೋ ಗಾಂಜಾ ಮತ್ತು ಐದು ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ.

ಹಾಗೂ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಕೀನ್ಯಾ ಮೂಲದ ಮಹಿಳಾ ಆರೋಪಿಯನ್ನ ಬಂಧಿಸಲಾಗಿದ್ದು, 4.08 ಕೋಟಿ ಮೌಲ್ಯದ 2.044 ಕೆ.ಜಿ. ಎಂಡಿಎಂಎ ಕ್ರಿಸ್ಟಲ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ತೂಕ ಮಾಪಕವನ್ನ ವಶಪಡಿಸಿಕೊಳ್ಳಲಾಗಿದೆ.

ಕಳೆದ ವರ್ಷ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿ ಕಮ್ಮನಹಳ್ಳಿಯಲ್ಲಿ ಹೇರ್ ಡ್ರೆಸರ್ ಆಗಿ ಕೆಲಸ ಮಾಡುತ್ತಿದ್ದಳು. ನೈಜೀರಿಯಾ ಮತ್ತು ತಾಂಜಾನಿಯಾ ಮೂಲದ ಇಬ್ಬರು ಆರೋಪಿಗಳ ಬಳಿ ಮಾದಕ ವಸ್ತುಗಳನ್ನ ಖರೀದಿಸಿ ತಂದು ಪರಿಚಿತ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವಿದೇಶಿ ಅಂಚೆ ಕಚೇರಿಗೆ ಬಂದಿದ್ದ 1.5 ಕೋಟಿ ಮೌಲ್ಯದ 1.5 ಕೆ.ಜಿ. ಹೈಡ್ರೋ ಗಾಂಜಾವನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್​, ಫ್ರಾನ್ಸ್‌ನಿಂದ ಬಿಸ್ಕೆಟ್ ಮತ್ತು ಚಾಕೊಲೇಟ್ ಪ್ಯಾಕೆಟ್‌ಗಳೊಳಗೆ ಮಾದಕ ಪದಾರ್ಥಗಳನ್ನ ಅಡಗಿಸಿ ಕಳುಹಿಸಲಾಗಿತ್ತು ಎಂಬುದನ್ನ ಪೊಲೀಸರು ಪತ್ತೆಹಚ್ಚಿದ್ದಾರೆ. ಕೆ ಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

81.21 ಕೋಟಿ‌ ಮಾಲು ವಸ್ತು ಜಪ್ತಿ:

ಮಾದಕ ದಂಧೆಕೋರರ ವಿರುದ್ಧದ ಸಮರವನ್ನು ಮತ್ತಷ್ಟು ಚುರುಗೊಳಿಸಿರುವ ಬೆಂಗಳೂರು ನಗರ ಪೊಲೀಸರು ಪ್ರಸಕ್ತ ವರ್ಷ 81.21 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ‌ ಪದಾರ್ಥ ವಶಪಡಿಸಿಕೊಂಡಿದ್ದಾರೆ.

2025ರ ಅಕ್ಟೋಬರ್ 8 ರವರೆಗಿನ ಅಂಕಿ – ಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ 711 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 1,013 ಭಾರತೀಯ ಹಾಗೂ 35 ವಿದೇಶಿ ಮೂಲದ ಆರೋಪಿಗಳ ಸಹಿತ 1,048 ಜನರನ್ನು ಬಂಧಿಸಲಾಗಿತ್ತು. ಬಂಧಿತರಿಂದ ಒಟ್ಟು 1483.30 ಕೆ.ಜಿ ತೂಕದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments