Sunday, November 24, 2024
Google search engine
Homeತಾಜಾ ಸುದ್ದಿಚಾರ್ಮಾಡಿಯಲ್ಲಿ ಭಾರೀ ಮಳೆಗೆ ಹಲವೆಡೆ ಗುಡ್ಡ ಕುಸಿತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ!

ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಹಲವೆಡೆ ಗುಡ್ಡ ಕುಸಿತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ!

ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನ ಹಲವು ಕಡೆ ಗುಡ್ಡ ಕುಸಿತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಭಾರೀ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಅಲ್ಲದೇ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಕಕ್ಕಿಂಜೆ, ಚಾರ್ಮಾಡಿ ಘಾಟ್ ​ರಸ್ತೆಗಳು ಕೂಡ ಜಲಾವೃತಗೊಂಡಿವೆ.

ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಾಗಿವೆ. ಇದರಿಂದ ವಾಹನ ಸಂಚಾರ ಮತ್ತು ಜನಜೀವನ ಅಸ್ತವ್ಯವಾಗಿದೆ. ಇದರಿಂದ ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ಸಂಪರ್ಕ ಕಡಿತಗೊಂಡಿವೆ.

ಚಾರ್ಮಾಡಿ ಘಾಟ್‌ನಲ್ಲಿ 10ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ಇದರಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಡಿತವಾಗಿತ್ತು. ಹಾಸನ ಮತ್ತು ಚಾರ್ಮಾಡಿ ಘಾಟ್​ ಮೂಲಕ ದಕ್ಷಿಣ ಕನ್ನಡಕ್ಕೆ ಹೋಗುವ ಮಾರ್ಗಗಳು ಸಹ ಬಂದ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲು ವ್ಯವಸ್ಥೆ ಮಾಡಲಾಗಿತ್ತು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಚಾರ್ಮಾಡಿ ಘಾಟ್‌ನ ರಸ್ತೆಗಳಲ್ಲಿ ನೀರು ನದಿಯಂತೆ ಹರಿತ್ತಿದೆ.

ಇದೇ ವೇಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರ ಪರದಾಡುವಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments