Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ರಾಜ್ಯ

ಗ್ರಾ.ಪಂ. ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ರಾಜ್ಯದ 95,75,935 ಆಸ್ತಿ ಪ್ರಮಾಣ ಪತ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 16 ವೀಕ್ಷಣೆಗಳು
priyank kharge
priyank kharge

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಮಹತ್ತರ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದುʼ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199(ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ.

ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮ ಪಂಚಾಯಿತಿಯ ಎಲ್ಲಾ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ, ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ದಿಗೊಳಿಸುವುದರ ಮೂಲಕ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳಲು ಸಹಕಾರಿಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧರಣೆ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ(ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ಗ್ರಾಮೀಣ ಅಭಿವೃದ್ಧಿ ಸಚಿವರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment