Wednesday, September 23, 2026
Google search engine
Homeರಾಜ್ಯಅಟ್ಟಿಕಾ ಗೋಲ್ಡ್ ಕಂಪನಿಯ 19 ಸ್ಥಳಗಳ ಮೇಲೆ ಇಡಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಯ 19 ಸ್ಥಳಗಳ ಮೇಲೆ ಇಡಿ ದಾಳಿ

ಬೆಂಗಳೂರು: ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಚಿನ್ನ ಖರೀದಿ ಸಂಸ್ಥೆ ಅಟ್ಟಿಕಾ ಗೋಲ್ಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೇಶದ ವಿವಿಧೆಡೆ ಇರುವ ಅಟ್ಟಿಕಾ ಗೋಲ್ಡ್ ಕಂಪನಿಯ ಕಚೇರಿಗಳು ಹಾಗೂ ಸಂಸ್ಥೆಯ ಮಾಲೀಕರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ 19ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ಪರಿಶೀಲನೆ ನಡೆಸಿದ್ದಾರೆ.

ಆರ್ಥಿಕ ವಂಚನೆ ಮತ್ತು ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ವಂಚನೆ ಆರೋಪ:

ಅಟ್ಟಿಕಾ ಗೋಲ್ಡ್ ಕಂಪನಿಯು ಗ್ರಾಹಕರು ಹಾಗೂ ಹೂಡಿಕೆದಾರರಿಗೆ ವಂಚನೆ ಮಾಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಣಕಾಸು ವ್ಯವಹಾರಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಅಟ್ಟಿಕಾ ಬಾಬು ನಾಪತ್ತೆ:

ಇಡಿ ದಾಳಿ ನಡೆದ ಬಳಿಕ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ನಾಪತ್ತೆಯಾಗಿದ್ದಾರೆ ,ಅಟ್ಟಿಕಾ ಗೋಲ್ಡ್ ಕಂಪನಿ ಹಾಗೂ ಅದರ ಸಂಸ್ಥಾಪಕ ಬೊಮ್ಮನಹಳ್ಳಿ ಬಾಬು ಅಲಿಯಾಸ್ ಅಟ್ಟಿಕಾ ಬಾಬು ವಿರುದ್ಧ ಈ ಹಿಂದೆಯೂ ಪ್ರಕರಣಗಳು ದಾಖಲಾಗಿದ್ದವು. ಕಳ್ಳತನವಾಗಿದ್ದ ಚಿನ್ನಾಭರಣಗಳನ್ನು ಕಡಿಮೆ ಬೆಲೆಗೆ ಖರೀದಿಸುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಹಾಗೂ ಪೊಲೀಸರು ಈ ಹಿಂದೆ ಕಂಪನಿಯ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದ್ದರು.

ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದ ಸಂದರ್ಭವೂ ಇತ್ತು. ಇದೀಗ ಮತ್ತೊಮ್ಮೆ ಆರ್ಥಿಕ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವ್ಯಾಪಕ ಪರಿಶೀಲನೆ ನಡೆಸಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಇಡಿ ಪರಿಶೀಲನೆ ವೇಳೆ ಯಾವ ದಾಖಲೆಗಳು ಹಾಗೂ ಆಸ್ತಿಗಳು ಪತ್ತೆಯಾಗಿವೆ, ಎಷ್ಟು ಮೊತ್ತದ ಹಣಕಾಸು ವ್ಯವಹಾರಗಳು ತನಿಖೆಯ ವ್ಯಾಪ್ತಿಗೆ ಬಂದಿವೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments