Thursday, May 14, 2026
Google search engine
Homeಬೆಂಗಳೂರುಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧ ಬಲಿ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧ ಬಲಿ

ವಾಕಿಂಗ್ ಮಾಡುತ್ತಿದ್ದ ವೃದ್ಧರೊಬ್ಬರನ್ನು ಬೀದಿ ನಾಯಿಗಳು ದಾಳಿ ಮಾಡಿ ಕೊಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ.

ಸೀತಪ್ಪ ಸೋಮವಾರ ಬೆಳಗ್ಗೆ ವಾಕಿಂಗ್​ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು, ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ.

ಗಂಭೀರವಾಗಿ ಗಾಯಗೊಂಡಿದ್ದ ಸೀನಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಯಿ ಕಡಿತ ಕೇಸ್​ಗಳಲ್ಲಿ ತುಮಕೂರು ಮೊದಲನೇ ಸ್ಥಾನದಲ್ಲಿ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ಅಟ್ಯಾಕ್​ ಮಾಡಿವೆ. ಹೀಗಾಗಿ ನಾಯಿಗಳಿಗೆ ಊಟ ನೀಡದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಬಿಬಿಎಂಪಿಯ ಬಾಡೂಟ ಪ್ಲ್ಯಾನ್​ ಜಾರಿಗೂ ಮೊದಲೇ ಅಟ್ಟಹಾಸ ಮೆರೆದಿರುವ ಬೀದಿನಾಯಿಗಳು ಓರ್ವ ವ್ಯಕ್ತಿಯನ್ನ ಬಲಿ ಪಡೆದಿರುವುದು ದುರ್ದೈವ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments