Monday, June 15, 2026
Google search engine
Homeದೇಶಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯ: ಬಿಜೆಪಿ ಯುಗಾರಂಭ

ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯ: ಬಿಜೆಪಿ ಯುಗಾರಂಭ

ಪಾಟ್ನಾ (ಬಿಹಾರ): ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಮೂಲಕ ಬಿಹಾರದಲ್ಲಿ ಸತತ 20 ವರ್ಷಗಳ ಆಡಳಿತ ಅಂತ್ಯಗೊಂಡಿದೆ.

ಮಂಗಳವಾರ ಬೆಳಿಗ್ಗೆ ನಿತೀಶ್ ಕುಮಾರ್​ ಪಾಟ್ನಾದಲ್ಲಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಸರ್ಕಾರ ವಿಸರ್ಜನೆಯ ಹಕ್ಕು ಮಂಡಿಸಿದರು. ಕೂಡಲೇ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆಯನ್ನು ಅಂಗೀಕರಿಸಿದರು. ಈ ಮೂಲಕ ನಿತೀಶ್ ಕುಮಾರ್ ಅವರ ಆಡಳಿತಕ್ಕೆ ಅಧಿಕೃತವಾಗಿ ತೆರೆಬಿದ್ದಿತು.

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಬಿಜೆಪಿ ಬಿಹಾರದಲ್ಲಿ ಅಧಿಕಾರ ಹಿಡಿದಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದರು. ಆದರೆ ಅಂತಿಮವಾಗಿ ಡಿಸಿಎಂ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಸಾಮ್ರಾಟ್ ಚೌಧರಿ ಸಿಎಂ ಸ್ಥಾನಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಶಾಸಕಾಂಗ ಸಭೆಯಲ್ಲಿ ಸಾಮ್ರಾಟ್ ಆಯ್ಕೆ

ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್​ ಚೌಹಾಣ್​ ​ನೇತೃತ್ವದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಹಾರದ ನೂತನ ಸಿಎಂ ಅಭ್ಯರ್ಥಿಯನ್ನಾಗಿ ಸಾಮ್ರಾಟ್​ ಚೌಧರಿ ಅವರನ್ನು ಆಯ್ಕೆ ಮಾಡಲಾಯಿತು.

ಪಕ್ಷದ ಶಾಸಕಾಂಗ ಸಭೆಯಲ್ಲಿ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ತಾರಾಪುರದ ಬಿಜೆಪಿ ಶಾಸಕ ಚೌಧರಿ ಎನ್‌ಡಿಎ ಶಾಸಕಾಂಗ ಪಕ್ಷವಾಗಿ ಆಯ್ಕೆಯಾದ ನಂತರ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಮೂಲಕ ಬಿಹಾರದಲ್ಲಿ ಬಿಜೆಪಿಯ ಮೊದಲ ಸಿಎಂ ಎಂಬ ಗೌರವಕ್ಕೆ ಸಾಮ್ರಾಟ್ ಪಾತ್ರರಾಗಲಿದ್ದಾರೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಯುಗದ ಅಂತ್ಯದೊಂದಿಗೆ, ಸಾಮ್ರಾಟ್ ಯುಗ ಪ್ರಾರಂಭವಾಗುತ್ತಿದೆ. ಸಾಮ್ರಾಟ್ ಯುಗ ಎಂದರೆ ರಾಕೇಶ್ ಕುಮಾರ್, ಅವರನ್ನು ಸಾಮ್ರಾಟ್ ಚೌಧರಿ ಎಂದೂ ಕರೆಯುತ್ತಾರೆ. ಹೌದು, ಇದು ಕೇವಲ ಎಂಟು ವರ್ಷಗಳ ಹಿಂದೆ ಬಿಜೆಪಿಗೆ ಸೇರಿ ಅದರ ಉನ್ನತ ನಾಯಕರಲ್ಲಿ ಒಬ್ಬರಾದ ಅದೇ ಸಾಮ್ರಾಟ್.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments