ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಿಸಿದ ಎಫ್ ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.
ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.